ಅಕ್ರಮವಾಗಿ ಗಣಿ ಗುತ್ತಿಗೆ ಪರವಾನಗಿ ನೀಡಿದ್ದಾರೆ ಎನ್ನುವ ಆರೋಪ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣವನ್ನು ಸಿಬಿಐಗೆ ವಹಿಸಬೇಕು, ಅಕ್ರಮ ಗಣಿ ಗುತ್ತಿಗೆಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತರಿಗೆ ನಿರ್ದೇಶನ ನೀಡಬೇಕು, ಎಲ್ಲ ಗುತ್ತಿಗೆ ನವೀಕರಣಗಳನ್ನು ಕಾನೂನುಬಾಹಿರ ಎಂದು ಘೋಷಿಸಬೇಕು ಎಂದು ಬೆಂಗಳೂರಿನ ಉದ್ಯಮಿ ಎಂ ಪಿ ವೇಣುಗೋಪಾಲ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದೆ.
ಪ್ರಕರಣವೇನು?
2015 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್-1957 ಕಾಯ್ದೆಯಲ್ಲಿ ನವೀಕರಣವು 20 ವರ್ಷಗಳ ಅವಧಿಗೆ ಅನ್ವಯವಾಗುತ್ತಿತ್ತು. ಅದರ ಪ್ರಕಾರ ಸರ್ಕಾರವು “ಗಣಿ ಗುತ್ತಿಗೆಯ ನವೀಕರಣಕ್ಕೆ ಫಾರೆಸ್ಟ್ ಕ್ಲಿಯರೆನ್ಸ್‌ನ್ನು ಪಡೆದುಕೊಳ್ಳುವ ಸಲುವಾಗಿ ಮಾತ್ರ ಸಿದ್ದರಾಮಯ್ಯ ಸರ್ಕಾರ ಷರತ್ತುಬದ್ಧ ತಾತ್ವಿಕ ಅನುಮೋದನೆ ನೀಡಿದೆ.