ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್ 2ರವರೆಗೆ ಸ್ವಚ್ಛೋತ್ಸವ ಕಾರ್ಯಕ್ರಮದಡಿ ಹಸಿರು ಹಬ್ಬ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಕುರಿತ ವಿಡಿಯೋ ಹಾಗೂ ಛಾಯಾಚಿತ್ರಗಳಿಗೆ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ತಿಳಿಸಿದ್ದಾರೆ.
ಹಸಿರು ಹಬ್ಬ ಆಚರಣೆ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಹಾಗೂ ಹೆಚ್ಚು ಪ್ರಮಾಣದಲ್ಲಿ ತ್ಯಾಜ್ಯವನ್ನು ಉತ್ಪಾದಿಸದಂತೆ ಕೈಗೊಂಡ ಕ್ರಮಗಳ ಕುರಿತು ಗರಿಷ್ಟ 2 ನಿಮಿಷದ ವಿಡಿಯೋ ತುಣುಕು ಹಾಗೂ ಸಾರ್ವಜನಿಕ ರಸ್ತೆ, ಉದ್ಯಾನವನ, ಶಾಲೆ, ಸ್ಮಶಾನಗಳ ಸ್ವಚ್ಛತೆಯನ್ನು ನಗರದ ಪ್ರತಿಯೊಂದು ವಾರ್ಡ್ ಗಳ ನಾಗರೀಕ ಹಿತರಕ್ಷಣಾ ವೇದಿಕೆಗಳ ಸ್ವಸಹಾಯ ಸಂಘ, ಶಾಲಾ ವಿದ್ಯಾರ್ಥಿಗಳು ಮತ್ತು ಇತರೆ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಛಾಯಾಚಿತ್ರಗಳನ್ನು ಪಾಲಿಕೆಯ ವಾಟ್ಸ್ಅಪ್ ಸಂಖ್ಯೆ: 9449872599ಕ್ಕೆ ಅಪ್‌ಲೋಡ್ ಮಾಡಬೇಕು. ಪರಿಣಾಮಕಾರಿಯಾದ ವಿಡಿಯೋ ತುಣುಕು ಹಾಗೂ ಛಾಯಾಚಿತ್ರಗಳಿಗೆ ವಿಶೇಷ ಬಹುಮಾನ ನೀಡಲಾಗುವುದು.
ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ಸ್ವಚ್ಛೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಿಸರ ರಕ್ಷಣೆಗೆ ಕೈಜೋಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.