ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಮುಕ್ತಾಯಗೊಳ್ಳುವ 15 ದಿನಗಳ ಸ್ವಚ್ಛತಾ ಅಭಿಯಾನವು ಜಿಲ್ಲಾದ್ಯಂತ ಸಾವಿರಾರು ಜನರನ್ನು ಒಟ್ಟುಗೂಡಿಸಿ ಹೆಚ್ಚಿನ ಪರಿಣಾಮ ಬೀರುವ ಸ್ವಚ್ಛತಾ ಅಭಿಯಾನಗಳಿಗಾಗಿ ಸಾಮೂಹಿಕ ಜಿಲ್ಲಾ ಪಂಚಾಯತ್ ಆವರಣದಲ್ಲಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಚಾಲನೆ ನೀಡಿದರು.
ಧಾರವಾಡ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಮೂಲಕ ಹಾಗೂ ಸ್ವಚ್ಚತಾ ಹೀ ಸೇವಾ ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಿಳಿಸುತ್ತಾ, ಸ್ವಚ್ಛತಾ ಹಿ ಸೇವಾ ಅಭಿಯಾನವು ಅಕ್ಟೋಬರ್ 2ರಂದು ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದರು.
ಈ ಸುದ್ಧಿ ಓದಿದ್ದೀರಾ? ಧಾರವಾಡ | ಮಹಿಳೆಯರು ಸಾಕ್ಷರತೆಯಿಂದ ಸಂವಿಧಾನದ ಆಶಯಗಳನ್ನು ಅರಿಯಬೇಕು: ಶಂಕರ್ ಹಲಗತ್ತಿ
ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿಗಳು, ವ್ಯವಸ್ಥಾಪಕರು, ಜಿಲ್ಲಾ ಪಂಚಾಯತ್ನ ಎಲ್ಲ ಸಿಬ್ಬಂದಿಗಳು ಹಾಗೂ ಸ್ವ-ಸಹಾಯ ಸಂಘದ ಮಹಿಳೆಯರು ಹಾಜರಿದ್ದರು.