ಏಷ್ಯಾ ಕಪ್ 2025: ಭಾರತ-ಪಾಕಿಸ್ತಾನ ಪುನಃ ಮುಖಾಮುಖಿ

Date:

Advertisements

2025ರ ಏಷ್ಯಾ ಕಪ್ ಟಿ20 ಟೂರ್ನಮೆಂಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ರೋಚಕ ಸೆಣಸಾಟಕ್ಕೆ ಕ್ರೀಡಾಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಸೆಪ್ಟೆಂಬರ್ 14ರಂದು ಗುಂಪು ಹಂತದಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯ ಕುತೂಹಲ ಮಾತ್ರವಲ್ಲದೆ, ವಿವಾದಕ್ಕೂ ಕಾರಣವಾಗಿತ್ತು. ಈಗ ಸೂಪರ್ ಫೋರ್‌ನಲ್ಲಿ ಈ ಎರಡೂ ತಂಡಗಳು ಮತ್ತೊಮ್ಮೆ ಸೆಪ್ಟೆಂಬರ್ 21ರಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.

ಗುಂಪು ಹಂತದ ಪಂದ್ಯದ ಟಾಸ್ ಸಮಯದಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಪಾಕಿಸ್ತಾನದ ನಾಯಕನೊಂದಿಗೆ ಕೈಕುಲುಕದಿರುವುದು ಮತ್ತು ಪಂದ್ಯದ ಬಳಿಕ ಭಾರತ ತಂಡವು ಪಾಕಿಸ್ತಾನ ಆಟಗಾರರೊಂದಿಗೆ ಕೈಕುಲುಕಲು ನಿರಾಕರಿಸಿದ್ದು ಭಾರೀ ಚರ್ಚೆಗೆ ಕಾರಣವಾಯಿತು. ಈ ಘಟನೆಯಿಂದ ಕೋಪಗೊಂಡ ಪಾಕಿಸ್ತಾನ ತಂಡವು ಟೂರ್ನಮೆಂಟ್ ಬಹಿಷ್ಕರಿಸುವ ಬೆದರಿಕೆಯನ್ನೂ ಹಾಕಿತ್ತು. ಇದರಿಂದ ಯುಎಇ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ವಿಳಂಬವಾಯಿತು. ಆದರೆ, ಈಗ ವಿವಾದ ಕಡಿಮೆಯಾಗುವ ಮುನ್ನವೇ ಎರಡೂ ತಂಡಗಳು ಸೂಪರ್ ಫೋರ್‌ನಲ್ಲಿ ಮತ್ತೆ ಎದುರಾಗುತ್ತಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಸ್ತೆ ಗುಂಡಿ ಮುಚ್ಚುವುದು ಸಚಿವ ಡಿ.ಕೆ. ಶಿವಕುಮಾರ್ ಕೆಲಸವೇ?

ಗ್ರೂಪ್ ಎನಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿದ್ದು, ಆಡಿದ ಎರಡು ಪಂದ್ಯಗಳನ್ನು ಗೆದ್ದು ಅಗ್ರಸ್ಥಾನದಲ್ಲಿದೆ. ಒಮಾನ್ ವಿರುದ್ಧದ ಕೊನೆಯ ಲೀಗ್ ಪಂದ್ಯವನ್ನು ಭಾರತ ಇನ್ನೂ ಆಡಬೇಕಿದೆ. ಆದರೆ, ಒಮಾನ್ ತಂಡ ತನ್ನ ಎರಡೂ ಆರಂಭಿಕ ಪಂದ್ಯಗಳಲ್ಲಿ ಸೋತು ಸೂಪರ್ ಫೋರ್ ಹಂತದಿಂದ ಹೊರಬಿದ್ದಿದೆ. ಮತ್ತೊಂದೆಡೆ, ಪಾಕಿಸ್ತಾನ ತಂಡ ಗುಂಪು ಹಂತದಲ್ಲಿ ಮೂರು ಪಂದ್ಯಗಳನ್ನು ಆಡಿದ್ದು, ಎರಡು ಗೆಲುವು ಮತ್ತು ಒಂದು ಸೋಲಿನೊಂದಿಗೆ ನಾಲ್ಕು ಅಂಕಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದೆ.

ಗುಂಪು ಹಂತದಲ್ಲಿ ದುಬೈನಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗೆ ಕೇವಲ 127 ರನ್‌ ಗಳಿಸಿತು. ಇದಕ್ಕೆ ಉತ್ತರವಾಗಿ, ಭಾರತ ತಂಡ 15.5 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ಕಳೆದುಕೊಂಡು ಗುರಿಯನ್ನು ಸುಲಭವಾಗಿ ತಲುಪಿತು.

ಸೂಪರ್ ಫೋರ್‌ನ ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ. ಭಾರತ ತಂಡ ತನ್ನ ಆಕರ್ಷಕ ಫಾರ್ಮ್‌ನೊಂದಿಗೆ ಮತ್ತೊಮ್ಮೆ ಪಾಕಿಸ್ತಾನವನ್ನು ಮಣಿಸುವ ವಿಶ್ವಾಸದಲ್ಲಿದೆ. ಆದರೆ, ಗುಂಪು ಹಂತದ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ ತಂಡ ಈ ಬಾರಿ ತಿರುಗೇಟು ನೀಡಲು ಸಜ್ಜಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

ಶೀತಲ್ ದೇವಿಗೆ ಐತಿಹಾಸಿಕ ಚಿನ್ನ; ವಿಶ್ವ ಪ್ಯಾರಾ ಆರ್ಚರಿಯಲ್ಲಿ ಭಾರತದ ಹೆಮ್ಮೆ

ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆದ ವಿಶ್ವ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

Asia CUP2025 | ‘ಸೂಪರ್ ಓವರ್’ ಪಂದ್ಯದಲ್ಲಿ ಲಂಕಾ ಮಣಿಸಿ, ಫೈನಲ್‌ಗೆ ಭಾರತ ಲಗ್ಗೆ

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಏಷ್ಯಾ ಕಪ್‌ ಕ್ರಿಕೆಟ್‌...

Download Eedina App Android / iOS

X