ಶಿವಮೊಗ್ಗ | ಬಂಜಾರ ಸಮುದಾಯದಿಂದ ಮೀಸಲಾತಿಯ ಅಣಕು ಶವಯಾತ್ರೆ ; ಶಿವಮೂರ್ತಿ ವೃತ್ತದಲ್ಲಿ ಟ್ರ್ಯಾಕ್ಟರ್‌ ಅಡ್ಡ ನಿಲ್ಲಿಸಿ ರಸ್ತೆ ತಡೆ

Date:

Advertisements

ಶಿವಮೊಗ್ಗ, ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಬಂಜಾರ ಸಮುದಾಯ ನಡೆಸುತ್ತಿರುವ ಸತ್ಯಾಗ್ರಹ 7ನೇ ದಿನಕ್ಕೆ ಕಾಲಿಟ್ಟಿದೆ. ಇವತ್ತು ಮೀಸಲಾತಿಯ ಅಣಕು ಶವಯಾತ್ರೆ ನಡೆಸಿ ಬಂಜಾರ ಸಮುದಾಯದವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸವಳಂಗ ರಸ್ತೆಯಲ್ಲಿ ಮೀಸಲಾತಿಯ ಅಣಕು ಶವಯಾತ್ರೆ ನಡೆಸಲಾಯಿತು. ಶಿವಮೂರ್ತಿ ಸರ್ಕಲ್‌ನಲ್ಲಿ ಅಣಕು ಶವವನ್ನು ಇರಿಸಿ ಘೋಷಣೆ ಕೂಗಿದರು. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶವಯಾತ್ರೆ ಮುಂದುವರೆಸಿದರು.

ಶಿವಮೂರ್ತಿ ವೃತ್ತದಲ್ಲಿ ಎಲ್ಲ ಕಡೆ ಟ್ರ್ಯಾಕ್ಟರ್‌ಗಳನ್ನು ರಸ್ತೆಗೆ ಅಡ್ಡ ನಿಲ್ಲಿಸಿ ರಸ್ತೆ ತಡೆ ನಡೆಸಲಾಯಿತು. ಇದರಿಂದ ಸವಳಂಗ ರಸ್ತೆ, ಕುವೆಂಪು ರಸ್ತೆ, ಜಯನಗರ ಮುಖ್ಯ ರಸ್ತೆಯಲ್ಲಿ ವಾಹನಗಳು ಸರತಿಯಲ್ಲಿ ನಿಲ್ಲುವಂತಾಯಿತು.


1002258392

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಅವರು ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಮೀಸಲಾತಿಯ ಉದ್ದೇಶವೇ ಹಾಳಾಗಲಿದೆ. ಆದ್ದರಿಂದ ಮೀಸಲಾತಿಯ ಶವಯಾತ್ರೆ ಮಾಡುತ್ತಿದ್ದೇವೆ ಎಂದು ಮಾಜಿ ಶಾಸಕ ಅಶೋಕ್ ನಾಯ್ಕ್ ಹೇಳಿದರು.

ಸಿದ್ದಾಪುರ, ರಾಮನಕೊಪ್ಪ, ವೀರಾಪುರ, ಸಿರಿಯೂರು, ಬಿಳಕಿ, ಹೆಬ್ಬಂಡಿ ಕೋಮಾರನಹಳ್ಳಿ, ಬಾಬಳ್ಳಿ, ನಾಗತಿ ಬೆಳಗಲು, ಹೊಸಹಳ್ಳಿ, ಚಿಕ್ಕಮರಡಿ, ಕಾಟಿಕೆರೆ, ಅಬ್ಬಲಗೆರೆ, ಹುಣಸೋಡು, ಬಿಕ್ಕೋನಹಳ್ಳಿ ಬೀರನಕೆರೆ, ಮೇಲಿನ ಕುಂಚನಹಳ್ಳಿಯ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

Download Eedina App Android / iOS

X