ಸರ್ಕಾರಿ ಆಸ್ಪತ್ರೆಗೆ ಸೂಕ್ತವಾದ ಸುಮಾರು 149 ಎಕರೆಗೆ ಹೆಚ್ಚು ಸ್ಥಳಾವಕಾಶ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ಈ ತರ ವ್ಯವಸ್ಥೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಇಲ್ಲ. ಹಾಗಾಗಿ ಸರ್ಕಾರ ಪಿಪಿಪಿ(ಸಾರ್ವಜನಿಕ-ಖಾಸಗಿ ಸಹಭಾಗಿತ್ವ) ಮಾದರಿಯನ್ನು ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕೆಂದು ಹೋರಾಟ ಸಮಿತಿ ಸದಸ್ಯ ಅರವಿಂದ ಕುಲಕರ್ಣಿ ಹೇಳಿದರು.
ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಉದ್ದೇಶಿಸಿ ಮಾತನಾಡಿದರು.
ಹಿರಿಯ ಪತ್ರಕರ್ತ ಅನಿಲ ಹೊಸಮನಿ ಮಾತನಾಡಿ, “ಖಾಸಗಿ ಸಹಭಾಗಿತ್ವದಲ್ಲಿ ಕಾಲೇಜು ಆರಂಭವಾದರೆ ಅಲ್ಲೇ ಬಡ ಮತ್ತು ಮಧ್ಯಮ ವರ್ಗದ ಹಾಗೂ ಜನಸಾಮಾನ್ಯರ ಮಕ್ಕಳು ಕಲಿಯಲು ಸಾಧ್ಯವಾಗುವುದಿಲ್ಲ. ಇದು ಮುಂದೆ ಕ್ರಮೇಣ ಸಂಪೂರ್ಣ ಖಾಸಗೀಕರಣಗೊಂಡು ಬಡವರ ಶಿಕ್ಷಣದ ಹಕ್ಕನ್ನು ಕಿತ್ತುಕೊಳ್ಳುತ್ತದೆ. ಆದ್ದರಿಂದ ನಾವೆಲ್ಲರೂ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟಕ್ಕೆ ಮುನ್ನಡೆಯಬೇಕಾಗುತ್ತದೆ. ಹಂತ ಹಂತವಾಗಿ ಈ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ. ಪಿಪಿ ಮಾದರಿಯನ್ನು ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಶಾಸಕ ಯತ್ನಾಳ್ ಅವಹೇಳನಕಾರಿ ಹೇಳಿಕೆ; ವಿಜಯಪುರ ಜಿಲ್ಲಾ ಕಾಂಗ್ರೆಸ್ ಖಂಡನೆ
ಈ ವೇಳೆ ಅಣ್ಣಾರಾಯ ಇಳಗೆರಿ, ಜಗದೀಶ ಸೂರ್ಯವಂಶಿ, ಸುರೇಶ ವಬಿಜಾಪುರ, ಶ್ರೀನಾಥ ಪೂಜಾರಿ, ಅಕ್ರಮ ಮಾಶಾಳಕರ, ಮಲ್ಲಿಕಾರ್ಜುನ ಕೆಂಗನಾಳ, ಲಲಿತಾ ಜಗದೇವ ಸೂರ್ಯವಂಶಿ, ದಸ್ತಗಿರಿ ಉಕ್ಕಲಿ, ಗೀತಾ ಎಚ್, ಮಹಾದೇವಿ ಧರ್ಮಶೆಟ್ಟಿ, ಮಲ್ಲಿಕಾರ್ಜುನ ಬಟಗಿ, ಬಾಬು ರಾವ್ ವೀರಕಬ್ಬಿ, ಪ್ರಭುಗೌಡ ಪಾಟೀಲ, ಅಬ್ದುಲ್ ರೆಹಮಾನ ನಾಸಿರ್, ಸಿದ್ದನಗೌಡ ಪಾಟೀಲ, ಲಕ್ಷ್ಮಣ ಕಂಬಾಗಿ, ರೆಹಮಾನ್, ನೀಲಾಂಬಿಕೆ ಬಿರಾದಾರ, ಬಸೀರ್ ಅಹಮದ್ ತಾಂಬೆ, ಲಕ್ಷ್ಮಣ ಹಂದ್ರಾಳ, ಸಿಸ್ಟರ್ ಸೆಂಥಿಯ ಪೇರಾರಿ, ಶೋಭಾ ವಾಲೆಕಾರ, ರೇಣುಕಾ ಕಟ್ಟಿಮನಿ, ಜಯಶ್ರೀ ಚಲವಾದಿ, ಸುನಿತಾ ಮೋರೆ ಹಾಗೂ ಸರೋಜ ಕಟ್ಟಿಮನಿ ಇದ್ದರು.