ಕೊಪ್ಪಳ | ಬಸನಗೌಡ ಪಾಟೀಲ್ ಯತ್ನಾಳ್ ಬಂಧನಕ್ಕೆ ವೆಲ್ಫೇರ್ ಪಾರ್ಟಿ ಮಹಿಳಾ ವಿಭಾಗ ಆಗ್ರಹ

Date:

Advertisements

ಮೈಸೂರು ನಗರದ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬ ಉದ್ಘಾಟನೆಯ ಬಗ್ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುವಾಗ, ʼಮೈಸೂರು ದಸರಾದಲ್ಲಿ ಸನಾತನ ಧರ್ಮದವರು ಮಾತ್ರ ಚಾಮುಂಡಿ ದೇವಿಗೆ ಹೂ ಮುಡಿಸಬೇಕು. ಅದರ ಹೊರತು ಒಬ್ಬ ಸಾಮಾನ್ಯ ದಲಿತ ಹೆಣ್ಣುಮಕ್ಕಳಿಗೆ ಅವಕಾಶ ಇಲ್ಲʼವೆಂದು ಹೇಳುವ ಮೂಲಕ ಇಡೀ ರಾಜ್ಯದ ದಲಿತ ಮಹಿಳೆಯರಿಗೆ ಅವಮಾನ ಮಾಡಿರುವುದರಿಂದ ಕೂಡಲೇ ಅವರನ್ನು ಬಂಧಿಸುವಂತೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮಹಿಳಾ ವಿಭಾಗ ರಾಜ್ಯಾಧ್ಯಕ್ಷೆ ಸಬಿಹಾ ಪಟೇಲ್ ಅಗ್ರಹಿಸಿದ್ದಾರೆ.

“ಸಾರ್ವಜನಿಕವಾಗಿ ದಲಿತ ಹೆಣ್ಣುಮಕ್ಕಳ ಬಗ್ಗೆ ಕೀಳುಮಟ್ಟದಲ್ಲಿ ಹೇಳಿಕೆ ನೀಡುವ ಮೂಲಕ ಅವಮಾನ ಮಾಡಿದ್ದಾರೆ. ಇಂತಹ ಕೊಳಕು ಮನಸ್ಥಿತಿ ಮತ್ತು ಕೋಮು ಸಂಘರ್ಷದ, ಪ್ರಚೋದನಾಕಾರಿ ಹೇಳಿಕೆ ನೀಡಿರುವ ಇವರನ್ನು ವಿಡಿಯೊ ಆಧಾರದ ಮೇಲೆ ಎಸ್‌ಸಿ ದೌರ್ಜನ್ಯ ಕಾಯ್ದೆಯ ಅಡಿಯಲ್ಲಿ ಬಂಧಿಸಿ ಜೈಲಿಗೆ ಕಳುಹಿಸಬೇಕು” ಎಂದರು.

“ಶಾಸಕ ಬಸನಗೌಡ ಯತ್ನಾಳ್ ದಲಿತರು ಹಾಗೂ ಅಲ್ಪಸಂಖ್ಯಾತರ ಮಹಿಳೆಯರಿಗೆ ಅವಮಾನ ಮಾಡುವ ರೀತಿಯಲ್ಲಿ ನಿರಂತರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಯತ್ನಾಳ್ ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿದ್ದು, ದಲಿತರು ಹಾಗೂ ಅಲ್ಪಸಂಖ್ಯಾತ ಸಮಾಜಕ್ಕೆ ತುಂಬಾ ನೋವುಂಟು ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಪಿಪಿಪಿ ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮಾಡಬೇಕು: ಅರವಿಂದ ಕುಲಕ‌ರ್ಣಿ

“ಸಮಾಜದಲ್ಲಿ ಇಂಥ ಕೋಮುಪ್ರಚೋದನೆ ನೀಡಿ ಅಶಾಂತಿಗೆ ಕಾರಣವಾಗುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕತ್ವ ಸ್ಥಾನದಿಂದ ವಜಾಗೊಳಿಸಬೇಕು. ಒಬ್ಬ ಶಾಸಕರಾಗಿ ಜನರ ಸಮಸ್ಯೆಗಳ ಬಗ್ಗೆ ಕೆಲಸ ಮಾಡುವ ಬದಲು ಹಿಂದೂ ಮುಸ್ಲಿಮರ ಮಧ್ಯೆ ವಿಷಬೀಜ ಬಿತ್ತುವುದನ್ನೇ ಕಸುಬು ಮಾಡಿಕೊಂಡಿದ್ದಾರೆ. ಸರ್ಕಾರ ಇಂಥ ‌ವ್ಯಕ್ತಿಗಳ ಮೇಲೆ ಕಠಿಣ ಕ್ರಮ ವಹಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X