ಕಲಬುರಗಿಯಲ್ಲಿ ಅಘೋಷಿತ ಸ್ಲಂಗಳಾದ ರಾಮ ನಗರ ಭಾಗ-2, ಸಂಜು ನಗರ ಭಾಗ-2 ಮತ್ತು ಯಾದಗಿರಿ ಅಘೋಷಿತ ಸ್ಲಂಗಳಾದ ಮೌನೇಶ್ವರ ನಗರ, ಮದನಪೂರ ಭಾಗ-2, ತಪ್ಪಡಗೇರಾ, ಗಂಗಾನಗರ ಸ್ಲಂಗಳನ್ನು ಸ್ಲಂ ಎಂದು ಘೋಷಣೆ ಮಾಡದೆ ವಿಳಂಬ ನೀತಿ ಅನುಸರಿಸುತ್ತಿರುವ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಶ್ರೀಧರ ಸಾರವಾಡ ಮತ್ತು ದೇವಿಂದ್ರ ಇವರನ್ನು ಅಮಾನತುಗೊಳಿಸಿ ಅತೀ ಶೀಘ್ರವಾಗಿ ಸ್ಲಂ ಎಂದು ಘೋಷಣೆ ಮಾಡಬೇಕೆಂದು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ಕಲಬುರಗಿ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಬುಧವಾರ ಕಲ್ಯಾಣ ಕರ್ನಾಟಕ ಉತ್ಸವ ನಿಮ್ಮಿತ್ತ ಕಲಬುರಗಿ ನಗರಕ್ಕೆ ಆಗಮಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ ಮಾತನಾಡಿ, ‘ಸುಮಾರು ಮೂರು ವರ್ಷಗಳಿಂದ ಸದರಿ ಸ್ಲಂಗಳನ್ನು ಘೋಷಣೆ ಮಾಡಲು ಕಲಬುರಗಿ ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆಂದು ದೂರಿದರು.
ಆದ್ದರಿಂದ ಕಲಬುರಗಿ ಮತ್ತು ಯಾದಗಿರಿ ಅಘೋಷಿತ ಸ್ಲಂಗಳನ್ನು ಸ್ಲಂ ಎಂದು ಘೋಷಣೆ ಮಾಡಲು ವಿಳಂಬಕ್ಕೆ ಕಾರಣರಾದ ಶ್ರೀಧರ ಸಾರವಾಡ ಮತ್ತು ದೇವಿಂದ್ರಕುಮಾರ ರವರನ್ನು ಕೂಡಲೇ ಅಮಾನತುಗೊಳಿಸುವಂತೆ ಒತ್ತಾಯಿಸಿ ಕಲಬುರಗಿ ಸ್ಲಂ ಬೋರ್ಡ್ ಕಚೇರಿ ಎದುರುಗಡೆ ಆರು ದಿನಗಳಿಂದ ನಿರಂತ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪ.ಜಾ/ಪ.ಪಂ ಅವಲಂಬಿತರಿಗೆ ಸರ್ಕಾರಿ ಹುದ್ದೆ: ಸಚಿವ ಸಂಪುಟ ನಿರ್ಣಯ
ಮನವಿ ಸ್ವೀಕರಿಸಿದ ಸಿಎಮ್ ಸಿದ್ಧರಾಮಯ್ಯನವರು ಆದಷ್ಟು ಬೇಗ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸುತ್ತೇವೆಂದು ಭರವಸೆ ನೀಡಿದ ಬಳಿಕ ಅವರ ಆದೇಶದ ಮೇರೆಗೆ ಧರಣಿಯನ್ನು ಹಿಂಪಡೆಯಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷೆ ಗೌರಮ್ಮ ಮಾಕಾ, ಯಾದಗಿರಿ ಜಿಲ್ಲಾಧ್ಯಕ್ಷ ಹಣಮಂತ ಶಹಾಪೂರಕರ್,
ಕಾರ್ಯದರ್ಶಿ ಶರಣು ಕಣ್ಣಿ, ಸ್ಲಂ ನಿವಾಸಿಗಳು ಉಪಸ್ಥಿತರಿದ್ದರು.