ತುಮಕೂರು | ವಸ್ತುನಿಷ್ಠ ಸುದ್ದಿಯಿಂದ ವಿಶ್ವಾಸಾರ್ಹತೆ ಹೆಚ್ಚಳ : ಡಾ. ಕೆ. ನಾಗಣ್ಣ

Date:

Advertisements

 ಪ್ರಸ್ತುತ ಮಾಧ್ಯಮ ರಾಜಕೀಯ ಹೊರತಾಗಿರುವಂತವಂತದಲ್ಲ, ಆ ರೀತಿ ಆಗದಂತೆ ಈಗಿನ ಮಾಧ್ಯಮ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು. ವಸ್ತುನಿಷ್ಟ ಮತ್ತು ಸತ್ಯ ಮಾಹಿತಿಯನ್ನು ತಿಳಿಸುವುದು ಬಹಳ ಮುಖ್ಯ. ಇದರಿಂದ ಸಮಾಜದ ಸ್ವಾಸ್ತ್ಯ ಕಾಪಾಡಬಹುದು. ವಸ್ತುನಿಷ್ಠ ಸುದ್ದಿಯಿಂದ ವಿಶ್ವಾಸಾರ್ಹತೆ ಹೆಚ್ಚಳವಾಗುತ್ತದೆ ಎಂದು ಗೃಹ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ. ಕೆ. ನಾಗಣ್ಣ ಹೇಳಿದರು.

ತುಮಕೂರು ನಗರದ ಶ್ರೀ ಸಿದ್ಧಾರ್ಥ  ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನಗಳ ಆಂಕರಿಂಗ್ ಸುದ್ದಿ ನಿರೂಪಣಾ  ಕಾರ್ಯಗಾರದ ಸಮಾರೂಪ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅವರು ‘ವಿಷಯದ ಮಹತ್ವದ ಅನುಗುಣವಾಗಿ ಸುದ್ದಿ ಮಾಡುವುದು ಒಬ್ಬ ಪತ್ರಕರ್ತನ ಜವಾಬ್ದಾರಿ. ಆ ಹಾದಿಯಲ್ಲಿ ವಿದ್ಯಾರ್ಥಿಗಳು ಮುನ್ನಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ತಿಳಿಸಿದರು. 

ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಹೇಮಲತಾ  ಮಾತನಾಡಿ ಹಡಗು ನೀರಿನ ಮೇಲೆ ತೇಲುವ ರೀತಿಯಲ್ಲಿ ವೀಕ್ಷಕರ ಮನಸ್ಸು ಕೂಡ ವಿಚಲಿತಗೊಳ್ಳುತ್ತಿರುತ್ತದೆ, ಆ ವಿಚಲಿತ ಮನಸ್ಸನ್ನು ಹಿಡಿದಿಡುವ ಶಕ್ತಿ ನಿರೂಪಕರಿಗೆ ಮಾತ್ರ ಸಾಧ್ಯ, ಅಂತಹ ಕೌಶಲ್ಯವನ್ನು ವಿದ್ಯಾರ್ಥಿಗಳು ಕಲಿಯಲಿಕ್ಕೆ ಇಂತಹ ಕಾರ್ಯಾಗಾರಗಳು ವೇದಿಕೆಯನ್ನು ಕಲ್ಪಿಸಿಕೊಡುತ್ತವೆ. ಅ ಅವಕಾಶಗಳನ್ನು ಬಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. 

1002071679

ಕಾರ್ಯಕ್ರಮಕ್ಕೆ ಆಗಮಿಸಿದ್ದ ಕಾಲೇಜಿನ ನಿರ್ವಹಣಾ ವಿಭಾಗದ ಪ್ರಾಂಶುಪಾಲೆ ಡಾ. ಮಮತಾ ಜಿ  ಮಾತನಾಡಿ ಈ ಒಂದು ಕಾರ್ಯಗಾರ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ರೀತಿಯ ಕೌಶಲ್ಯ ಭರಿತ ಕಾರ್ಯಗಾರಗಳು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಆಯೋಜನೆಗೊಂಡರೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು

1002071678

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಬಿ. ಟಿ ಮುದ್ದೇಶ್ ಮಾತನಾಡಿ ಅವಕಾಶಗಳನ್ನು ಬಳಿಸಿಕೊಳ್ಳುವ ಗುಣ ವಿದ್ಯಾರ್ಥಿಗಳಲ್ಲಿದ್ದರೆ ಅವರು ಪತ್ರಿಕೋದ್ಯಮದ ಕ್ಷೇತ್ರ ಯಾವದೇ ವಿಭಾಗದಲ್ಲೂ ಯಶಸ್ಸು ಕಾಣಬಲ್ಲರು.  ಯಶಸ್ವಿಯಾಗಿ ಕಾರ್ಯಗಾರವನ್ನು ನೆಡುಸುವಲ್ಲಿ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮೂರು ದಿನಗಳ ಕಾರ್ಯಗಾರದಲ್ಲಿ ಭಾಗಿಯಾಗಿದ್ದ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಂತಹ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಅಧ್ಯಾಪಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X