ಪ್ರಸಕ್ತ ಸಾಲಿನಲ್ಲಿ ರೈತರು ಬೆಳೆದಿರುವ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಎನ್ ಭರ್ಮಣ್ಣ ಅವರು ವಿಜಯನಗರ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
ಕೊಟ್ಟೂರು ತಾಲೂಕಿನ ರೈತರ ಸಹಯೋಗದೊಂದಿಗೆ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ನೀಡಿ, ಮಾತನಾಡಿದ ಅವರು, “ಖರೀದಿ ಕೇಂದ್ರ ತೆರೆಯಬೇಕು, ಒಂದು ಎಕರೆ ಪ್ರದೇಶದಲ್ಲಿ ಬೆಳೆದಿರುವ ಈರುಳ್ಳಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನಿಗದಿಮಾಡಬೇಕು” ಎಂದು ರೈತ ಮುಖಂಡ ಭರ್ಮಣ್ಣ ಒತ್ತಾಯಿಸಿದರು.
“ಕೊಟ್ಟುರು ತಾಲೂಕಿನ ರೈತರು ದಾಖಲು ಪ್ರಮಾಣದಲ್ಲಿ ಜೋಳ, ಮೆಕ್ಕೆಜೋಳ ಸೇರಿದಂತೆ ಇತರೆ ದವಸ ಧಾನ್ಯ ಹಾಗೂ ಈರುಳ್ಳಿ ಬೆಳೆದಿದ್ದಾರೆ. ಕೊಟ್ಟೂರು APMC ಮಾರುಕಟ್ಟೆಯಲ್ಲಿ ಖರೀದಿ ಕೇಂದ್ರಗಳು ತೆರೆದಿಲ್ಲ, ಕಾರಣ ಶೀಘ್ರವೇ ಖರೀದಿ ಕೇಂದ್ರಗಳನ್ನು ತೆರೆಯಬೇಕು ಮತ್ತು ದವಸ ಧಾನ್ಯಗಳಿಗೆ ಈರುಳ್ಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಅಗತ್ಯ ಕ್ರಮ ಜರುಗಿಸಬೇಕು” ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಸನಗೌಡ ಪಾಟೀಲ್ ಯತ್ನಾಳ್ ಬಂಧನಕ್ಕೆ ವೆಲ್ಫೇರ್ ಪಾರ್ಟಿ ಮಹಿಳಾ ವಿಭಾಗ ಆಗ್ರಹ
ಈ ಸಂದರ್ಭದಲ್ಲಿ ಕರಾರೈ ಸಂಘದ ಕೊಟ್ಟೂರು ತಾಲೂಕಧ್ಯಕ್ಷ ಶ್ರೀದರ್ ಎಸ್ ಒಡವಯರ್ ಸೇರಿದಂತೆ ಕೊಟ್ಟೂರು ಪಟ್ಟಣ ಹಾಗೂ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಅನೇಕ ರೈತರು ಇದ್ದರು.
ವರದಿ : ವಿ ಜಿ ವೃಷಭೇಂದ್ರ ಕೂಡ್ಲಿಗಿ