2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (UAPA) ಅಡಿಯಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಹಾಗೂ ಮೀರನ್ ಹೈದರ್ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಸೆಪ್ಟೆಂಬರ್ 22ಕ್ಕೆ ಮುಂದೂಡಿದೆ.
ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಸೇರಿದಂತೆ ಒಟ್ಟು ಒಂಬತ್ತು ಆರೋಪಿಗಳಿಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌ನ ಸೆಪ್ಟೆಂಬರ್ 2 ರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಯಾವುದೇ ಕಾರಣವಿಲ್ಲದೇ ಸೆ. 22ಕ್ಕೆ ಮುಂದೂಡಿದೆ.