ಈ ವರ್ಷ ಮುಂಗಾರು ವಾಡಿಕೆಯಂತೆ ರಾಜ್ಯಕ್ಕೆ ಆಗಮಿಸದ ಕಾರಣ, ಜೂನ್‌ನಲ್ಲಿ ಮಳೆಯ ಕೊರತೆ ಎದುರಾಗಿತ್ತು. ಬಳಿಕ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದು, ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ಹರಿದಿದ್ದವು. ಇದೀಗ, ಆಗಸ್ಟ್‌ನಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ. ಹಾಗಾಗಿ, ಜೂನ್‌ನಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಶೇ.14 ರಷ್ಟು ಮಳೆ ಕೊರತೆ ಕಂಡಿದೆ.
ಜೂನ್‌ನಿಂದ ಇಲ್ಲಿಯವರೆಗೂ 57.3 ಸೆಂ.ಮೀ ಮಳೆಯಾಗಬೇಕಿತ್ತು. ಆದರೆ, 49.6 ಸೆಂ.ಮೀ ಮಳೆಯಾಗಿದೆ. ಇದರಿಂದ ಶೇ. 14ರಷ್ಟು ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್ 1 ರಿಂದ 7ರವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದ್ದು, ರಾಜ್ಯದಲ್ಲಿ 5 ಮಿಮೀ ನಿಂದ 10 ಮಿಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಈ ವರ್ಷ ಡೆಂಗ್ಯೂ ಪ್ರಕರಣಗಳಲ್ಲಿ ಶೇ. 22ರಷ್ಟು ಏರಿಕೆ
ಉತ್ತರ ಒಳನಾಡಿನಲ್ಲಿ ವಾಡಿಕೆಯಂತೆ 28.2 ಸೆಂ.ಮೀ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ 249ಸೆಂ.ಮೀ ವಾಡಿಕೆ ಮಳೆಯಾಗಿದ್ದು, 216.6ಸೆಂ.ಮೀ ಮಳೆ ಬಿದ್ದಿದೆ. ಅದೇ ರೀತಿ, ದಕ್ಷಿಣ ಒಳನಾಡಿನಲ್ಲಿ 44.8 ಸೆಂ.ಮೀ ವಾಡಿಕೆ ಮಳೆಯಾಗಿದ್ದು, 34.6ಸೆಂ.ಮೀ ಮಳೆಯಾಗಿದೆ. ದಕ್ಷಿಣ ಒಳನಾಡು, ರಾಮನಗರ ಜಿಲ್ಲೆಯಲ್ಲಿ ಶೇ. 46ರಷ್ಟು ಮಳೆ ಕೊರತೆ ಎದುರಾಗಿದೆ.