ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ – ಪ್ರಶ್ನಿಸಿದ್ದ ಮೇಲ್ಮನವಿ ವಜಾ: ಸುಪ್ರೀಂ ಕೋರ್ಟ್

Date:

Advertisements

ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉತ್ಸವದ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದೆ.

ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಕೂಡ ಎತ್ತಿಹಿಡಿದಿತ್ತು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ನಾಲ್ಕು ಮೇಲ್ಮನವಿಗಳನ್ನು ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ವಿಭು ಭಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ಪೀಠವು ನಾಲ್ಕೂ ಅರ್ಜಿಗಳ ವಿಚಾರಣೆ ನಡೆಸಲು ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

ವಜಾಗೊಂಡ ಅರ್ಜಿಗಳಲ್ಲಿ ಮೈಸೂರಿನ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಸಲ್ಲಿಸಿದ ಅರ್ಜಿಯೂ ಸೇರಿದೆ. ಅರ್ಜಿದಾರರು ಯಾವುದೇ ಸಾಂವಿಧಾನಿಕ ಅಥವಾ ಕಾನೂನು ಉಲ್ಲಂಘನೆಯನ್ನು ಸಾಬೀತು ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಪೀಠವು ಅಭಿಪ್ರಾಯ ಪಟ್ಟಿದೆ.

ಇದನ್ನು ಓದಿದ್ದೀರಾ? ಬಾನು ಮುಷ್ತಾಕ್ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ವಜಾ | ಸುಪ್ರೀಂ ತೀರ್ಪಿನಿಂದ ಸರ್ಕಾರದ ನಿಲುವಿಗೆ ಮನ್ನಣೆ: ಸಿದ್ದರಾಮಯ್ಯ

“ರಾಜ್ಯ ಸರ್ಕಾರವು ಆಯೋಜಿಸಿದ ಸಮಾರಂಭವನ್ನು ಬೇರೆ ಧರ್ಮದ ವ್ಯಕ್ತಿಯೊಬ್ಬರು ಉದ್ಘಾಟಿಸುವುದರಿಂದ ಕಾನೂನು ಅಥವಾ ಸಾಂವಿಧಾನಿಕ ಹಕ್ಕು ಅಥವಾ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಯಾವುದೇ ಮೌಲ್ಯಗಳ ಉಲ್ಲಂಘನೆಯಾಗುತ್ತದೆ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಪೀಠವು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

Download Eedina App Android / iOS

X