ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದಲ್ಲಿ ಹಲವು ತಿಂಗಳಿಂದ ರಸ್ತೆ ಗುಂಡಿ ಸರಿಪಡಿಸದ ಹಿನ್ನೆಲೆ ಇಂದು (ಸೆ.19) ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ರಸ್ತೆ ಗುಂಡಿಗಳಿಗೆ ಹೂ ಹಾಕಿ ಪೂಜೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿ, ಅಧಿಕಾರಿಗಳ ಹಾಗೂ ಚುನಾಯಿತ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಗುಂಡಿ ಮುಚ್ಚದಿದ್ದರೆ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.
“2023ರಲ್ಲಿ ಕಾರ್ಯಕರ್ತರು ರಸ್ತೆ ಗುಂಡಿಗೆ ಪೂಜೆ ಮಾಡಿ ಪ್ರತಿಭಟನೆ ಮಾಡಿದ್ದರು. ಆಗ ಅಧಿಕಾರಿಗಳು ಕಾಟಾಚಾರಕ್ಕೆ ರಸ್ತೆ ಗುಂಡಿ ಮುಚ್ಚಿದ್ದರು. ಪ್ರಸ್ತುತ ರಸ್ತೆ ಗುಂಡಿ ಮುಚ್ಚದೆ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳ ಗಮನಕ್ಕೆ ತರುತ್ತಿದ್ದೇವೆ. ಈಗಲಾದರೂ ಎಚ್ಚೆತ್ತು ರಸ್ತೆಗುಂಡಿ ಮುಚ್ಚಬೇಕು. ವಾಹನ ಸವಾರರ, ಸಾರ್ವಜನಿಕರ ಸಂಚಾರೆಕ್ಕೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಚಿಂತಾಮಣಿ | ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಅಶೋಕ್ ರೆಡ್ಡಿ ಚಾಲನೆ
ಪ್ರತಿಭಟನೆಯಲ್ಲಿ ಕೆಆರ್‌ಎಸ್ ಪಕ್ಷದ ತಾಲೂಕು ಅಧ್ಯಕ್ಷ ಅಬ್ದುಲ್ ಖಯುಮ್, ಜಿಲ್ಲಾ ಕಾರ್ಯದರ್ಶಿ ಶಿವಾರೆಡ್ಡಿ, ತಾಲೂಕು ಕಾರ್ಯದರ್ಶಿ ವಿಶ್ವನಾಥ್, ತಾಲೂಕು ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಪಾಷಾ, ಆಟೋ ಘಟಕದ ಅಧ್ಯಕ್ಷ ಮಹಬೂಬ್ ಪಾಷಾ, ಚಂದ್ರು, ಅಬ್ಜಲ್ ಪಾಷಾ, ನಾರಾಯಣಸ್ವಾಮಿ, ಫೈರೋಜ್ ಪಾಷಾ ಹಾಗೂ ಸರ್ದಾರ್ ಭಾಗವಹಿಸಿದ್ದರು.