ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ತಹಶೀಲ್ದಾರ್ ರವರಿಗೆ ಸಮೀಕ್ಷಾ ಕಾರ್ಯದಲ್ಲಿ ನಿರತರಾಗುತ್ತಿರುವ ಶಿಕ್ಷಕರಿಗೆ ಆರ್ಥಿಕ ಸೌಲಭ್ಯದ ಜೊತೆಗೆ, ಈ ಹಿಂದೆ ಬೇಸಿಗೆ ರಜೆಯಲ್ಲಿ ಸಮೀಕ್ಷಾ ಕಾರ್ಯ ನಿರ್ವಹಿಸಿದ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡಬೇಕೆಂದು ಮನವಿ ಸಲ್ಲಿಸಿದ್ದಾರೆ.
ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಅಶೋಕ್ ರವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು. ತರಬೇತಿ ಜರುಗುತಿದ್ದ ಕೇಂದ್ರದಲ್ಲಿ ಸಮಯಾವಕಾಶದ ಕೊರತೆಯಿಂದ ಒಂದೆರಡು ಕೊಠಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕೊಠಡಿಗಳಿಗೂ ಖುದ್ದು ಭೇಟಿ ನೀಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಪರಿಗಣಿಸುವುದಾಗಿ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ‘ಸಹಜ ರಂಗ’ ತರಬೇತಿ ಶಿಬಿರದ ಸಮಾರೂಪ
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸುಷ್ಮಾ, ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಕೆ. ತಿಮ್ಮೇಗೌಡ, ಪೂರ್ಣಚಂದ್ರ ತೇಜಸ್ವಿ, ಉಪನ್ಯಾಸಕರಾದ ರೇವಣ್ಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್. ಆರ್. ಪೂರ್ಣಚಂದ್ರ ತೇಜಸ್ವಿ, ಪ್ರಧಾನ ಕಾರ್ಯದರ್ಶಿ ಸಿ. ಟಿ. ಲಕ್ಷ್ಮಣೇಗೌಡ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವೆಂಕಟೇಶ್, ಶಿಕ್ಷಣ ಸಂಯೋಜಕ ಮೋಹನ್ ಸೇರಿದಂತೆ ಇನ್ನಿತರರು ಮನವಿ ನೀಡುವಾಗ ಇದ್ದರು.