ಬೀದರ್ ಜಿಲ್ಲೆಯ ಹುಲಸೂರ ಪಟ್ಟಣದ ಇಕ್ಬಲ್ ಪಟೇಲ್ ಶಿಕ್ಷಣ ಸಂಸ್ಥೆಯ ಶೇಕ್ ಮೈನುದ್ದೀನ್ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ದೀಪಕ್ ದತ್ತಾತ್ರಿ, ನಯುಮ್ ಖಲೀಮ್, ಯುವರಾಜ್ ದಾಮೋದರ್ ಜಿಲ್ಲಾ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಫಯಾಜ್ ಪಟೇಲ್ ತಿಳಿಸಿದ್ದಾರೆ.
ʼಗಡಿ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಜೊತೆಗೆ ಸಂಸ್ಕಾರ, ಕ್ರೀಡಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಸಂಸ್ಥೆಯ ಗುರಿಯಾಗಿದೆ. ಪಿಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ಮುಖಾಂತರ ರಾಜ್ಯಕ್ಕೆ ಆಯ್ಕೆಯಾಗಿರುವುದು ಸಂತಸ ಮೂಡಿಸಿದ್ದು, ರಾಜ್ಯ ಮಟ್ಟದಲ್ಲೂ ವಿದ್ಯಾರ್ಥಿಗಳು ಗೆದ್ದು ಬರಲಿʼ ಎಂದು ಹಾರೈಸಿದ್ದಾರೆ.
ಇದನ್ನೂ ಓದಿ : ಬೀದರ್ | ಕನ್ನಡ ಮಾಧ್ಯಮ ಶಾಲೆ ಮುಚ್ಚಿದರೆ ಹೋರಾಟ: ಸುರೇಶ ಚನಶೆಟ್ಟಿ ಎಚ್ಚರಿಕೆ
ವಿದ್ಯಾರ್ಥಿಗಳ ಸಾಧನೆಗೆ ಇಕ್ಬಲ್ ಪಟೇಲ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.