ಧಾರವಾಡ | ಗಾಯತ್ರಿ ಜೊತೆಗೆ ಮುಕಳೆಪ್ಪ ಮದುವೆ; ಲವ್ ಜಿಹಾದ್ ಎಂದ ಬಜರಂಗದಳ

Date:

Advertisements

ಜಯಪ್ರಿಯ ಯೂಟ್ಯೂಬರ್ ಕ್ವಾಜಾ ಅಲಿಯಾಸ್ ಮುಕಳೆಪ್ಪ ಹಿಂದೂ ಯುವತಿ ಗಾಯತ್ರಿಯನ್ನು ಸುಳ್ಳು ದಾಖಲೆ ಸಲ್ಲಿಸಿ ಮದುವೆ ಆಗಿದ್ದಾನೆ ಎಂದು ಲವ್ ಜಿಹಾದ್ ಆರೋಪದಡಿ ಬಜರಂಗದಳದ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹಿಂದೂ ಯುವತಿಯನ್ನು ಮದುವೆಯಾಗಿರುವ ಖ್ವಾಜಾ ತನ್ನ ವೀಡಿಯೊಗಳಲ್ಲಿ ಹಿಂದೂ ಧರ್ಮವನ್ನು ಅವಮಾನಿಸುತ್ತಿದ್ದಾನೆ. ಮುಕಳೆಪ್ಪ ಹಿಂದೂ ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ ವಂಚಿಸುತ್ತಿದ್ದಾನೆ. ಈ ವರ್ಷ ಜೂನ್ 5ರಂದು ಮುಕಳೆಪ್ಪ ಗಾಯತ್ರಿ ಎಂಬುವರನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಉಪ ನೋಂದಣಿ ಕಚೇರಿಯಲ್ಲಿ ವಿವಾಹವಾಗಿದ್ದಾನೆ. ಈ ವಿವಾಹಕ್ಕಾಗಿ, ಮುಸ್ಲಿಮನಾದ ಖ್ವಾಜಾ ಅಲಿಯಾಸ್ ಮುಕಳೆಪ್ಪ ನಕಲಿ ದಾಖಲೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿ, ಆತನ ಯುಟ್ಯೂಬ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು‌ ಬ್ಯಾನ್ ಮಾಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಸರ್ಕಾರದ ಉಚಿತ ಆರೋಗ್ಯ ಸೇವೆಗಳ ಸದುಪಯೋಗವಾಗಲಿ: ಶಂಕರ ಶೇಳಕೆ

ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಮುಕಳೆಪ್ಪ ಮತ್ತು ಆತನ ಪತ್ನಿ ಗಾಯತ್ರಿ ಅವರನ್ನು ವಿಚಾರಣೆಗೆಂದು ಪೊಲೀಸ್‌ ಠಾಣೆಗೆ ಕರೆಸಿಕೊಂಡಿದ್ದ ಸಂದರ್ಭದಲ್ಲಿ ಗಾಯತ್ರಿ ಪೊಲೀಸರೆದುರು ಮಾತನಾಡಿ, ನನಗೆ ಯಾವುದೇ ರೀತಿಯ ಸಮಸ್ಯೆ. ನಾವಿಬ್ಬರೂ ಪರಸ್ಪರ ಒಪ್ಪಿಕೊಂಡು ಮದುವೆ ಆಗಿದ್ದೆವೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕರ್ತರು ಆಕೆಯ ಮನವೊಲಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಅದ್ಧರಿಂದ, ಎಫ್‌ಐಆರ್‌ ದಾಖಲಾಗಿಲ್ಲ ಮತ್ತು ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X