ಕೊಪ್ಪಳ | ಚುಕ್ಕನಕಲ್ಲು ಗ್ರಾಮದ ದಲಿತ ಕಾಲೋನಿಗೆ ಮೂಲಸೌಕರ್ಯ ಕಲ್ಪಿಸಲು ದಸಂಸ ಆಗ್ರಹ

Date:

Advertisements

ಕೊಪ್ಪಳ ತಾಲೂಕಿನ ಚುಕ್ಕನಕಲ್ಲು ಗ್ರಾಮದ ದಲಿತ (ಎಸ್‌ಸಿ) ಕಾಲೋನಿಗೆ ಚರಂಡಿ, ರಸ್ತೆ, ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಕೊಡಲು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿಯ ಚಂದ್ರಕಾಂತ ಎಸ್ ಕಾದ್ರೋಳ್ಳಿ ಆಗ್ರಹಿಸಿದರು.

ಚುಕ್ಕನಕಲ್ಲ ಗ್ರಾಮ ತಾಲೂಕಿನ ಬಹದ್ದೂರ್ ಬಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡಲಿದ್ದು, ಗ್ರಾಮ ಪಂಚಾಯತ್ ಪಿಡಿಒ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ವೇಗಿ ಅವರಿಗೆ ಮನವಿ ಸಲ್ಲಿಸಿದರು.

ಕಾದ್ರೋಳ್ಳಿ ಬಣದ ಜಿಲ್ಲಾಧ್ಯಕ್ಷ ನಿಂಗಪ್ಪ ಜಿ.ಎಸ್. ಬೆಣಕಲ್ ಮಾತನಾಡಿ, “ಚುಕ್ಕನಕಲ್ಲು ಗ್ರಾಮದ ಎಸ್ಸಿ ಕಾಲೋನಿಗೆ ಹಲವಾರು ವರ್ಷಗಳಿಂದ ಶುದ್ಧ ಕುಡಿಯುವ ನೀರಿಲ್ಲ. ಓಡಾಡಲು ಜನರಿಗೆ ಸರಿಯಾದ ರಸ್ತೆಯಿಲ್ಲ ಮತ್ತು ಸರಿಯಾದ ಒಳಚರಂಡಿ ವ್ಯವಸ್ಥೆಯಿಲ್ಲ. ಇದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿದು ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಸೊಳ್ಳೆಗಳ ಕಾಟ ಹೆಚ್ಚಾಗಿದೆ, ಅಲ್ಲದೇ ರೋಗರುಜಿನಗಳ ಭೀತಿ ಉಲ್ಬಣಗೊಂಡಿದೆ. ಹೀಗೆ ಹಲವು ಸಮಸ್ಯಗಳಿಂದ ಜನರು ತತ್ತರಿಸಿ ಹೋಗಿದ್ದಾರೆ. ಎರಡು ವರ್ಷಗಳ ಹಿಂದೆ ಹಲವು ಬಾರಿ ಬಹದ್ದೂರ್ ಬಂಡಿ ಪಿಡಿಒ ಮತ್ತು ತಾಲ್ಲೂಕು ಪಂಚಾಯಿತಿ ಇಓ ಅವರಿಗೆ ಮನವಿ ಪತ್ರ ನೀಡಿದರೂ ಯಾವದೇ ಪ್ರಯೋಜನ ಆಗಿಲ್ಲ. ಹೀಗಾಗಿ ಸ್ಥಳಿಯ ಅಧಿಕಾರಿಗಳು ಯಾವುದೇ ರೀತಿಯ ಸ್ಪಂದಿಸಿರುವುದಿಲ್ಲ. ತಾವಾದರೂ ಚುಕ್ಕನಕಲ್ಲ ಗ್ರಾಮದ ಎಸ್‌ಸಿ ಸಮುದಾಯದ ಕಾಲೋನಿಗೆ ಸಮಸ್ಯೆಗಳನ್ನು ಬಗೆಹರಿಸಿ” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕೊಪ್ಪಳ | ಟಣಕನಕಲ್ಲ ಗ್ರಾಮದ ದಲಿತ ಕಾಲೋನಿಯ ಬೇಡಿಕೆ ಈಡೇರಿಕೆಗೆ ಒತ್ತಾಯ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣೀತ ವೇಗಿ ಮನವಿಗೆ ಸ್ವೀಕರಿಸಿ ಚಕ್ಕನಕಲ್ಲ ಗ್ರಾಮದ‌ ದಲಿತ ಕಾಲೋನಿ ಸಮಸ್ಯಗಳನ್ನ ಶೀಘ್ರದಲ್ಲೇ ಬಗೆಹರಿಸುತ್ತೆವೆ. ಮೂಲಭೂತ ಸೌಕರ್ಯ ಒದಗಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರಿಯಪ್ಪ ಮಣ್ಣಿನವರ, ಜಿಲ್ಲಾ ಸಂಚಾಲಕ ಮೈಲಪ್ಪ ಮಾದಿನೂರು, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಶಶಿಕಲಾ ಮಠದ, ಯಲಬುರ್ಗಾ ತಾಲ್ಲೂಕು ಉಪಾಧ್ಯಕ್ಷ ವೀರೇಶ್ ದೊಡ್ಡಮನಿ, ಚೈತ್ರಾ ಚುಕ್ಕನಕಲ್ಲು, ವಿದ್ಯಾಶ್ರೀ ಚುಕ್ಕನಕಲ್ಲು ಮತ್ತು ಲಕ್ಷ್ಮೀ ಚುಕ್ಕನಕಲ್ಲು ಹಾಗೂ ಇತರರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

Download Eedina App Android / iOS

X