ಬಿಜೆಪಿ ಶಾಸಕರ ಕ್ಷೇತ್ರಕ್ಕೆ ₹25 ಕೋಟಿ ನೀಡಿದ್ದರೂ ಗುಂಡಿ ಮುಚ್ಚಿಲ್ಲ ಯಾಕೆ: ಡಿ ಕೆ ಶಿವಕುಮಾರ್‌ ಪ್ರಶ್ನೆ

Date:

Advertisements

ಪ್ರತಿಯೊಬ್ಬ ಬಿಜೆಪಿ ಶಾಸಕರ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯ ಇಲ್ಲದೆ ನಗರದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದರೂ ಏಕೆ ರಸ್ತೆಗುಂಡಿಗಳನ್ನು ಮುಚ್ಚಿಸಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.

ಸದಾಶಿವನಗರದ ನಿವಾಸದ ಬಳಿ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡುತ್ತಾರೆ. ಬಿಜೆಪಿಯವರು ರಸ್ತೆ ತಡೆಯದರೂ ಮಾಡಲಿ, ಬೇರೆ ಏನಾದರೂ ಮಾಡಲಿ” ಎಂದು ಕುಟುಕಿದರು.

“ಬಿಜೆಪಿಯವರು ಮೊದಲು ತಮ್ಮ‌ಪಾಲಿನ ಕೆಲಸ ಮಾಡಲಿ. ಅನಂತರ ರಾಜಕೀಯ ಮಾಡಲಿ. ನಾವು ರಸ್ತೆಗುಂಡಿ ಸಮಸ್ಯೆಯನ್ನು ಬಗೆಹರಿಸುತ್ತೇವೆ. ನಾವು ರಾಜಕೀಯ ಮಾಡುವುದು ಬಿಟ್ಟು ಜನರ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಅವರು ಕೇವಲ ರಾಜಕೀಯ ಮಾಡುತ್ತಿದ್ದಾರೆ” ಎಂದರು.

“ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ ರಸ್ತೆಗುಂಡಿಗಳು ಕಂಡರೆ ಗಮನಕ್ಕೆ ತರುವ ವ್ಯವಸ್ಥೆ ರೂಪಿಸಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X