ಕೆಎಂಎಫ್‌ ಉತ್ಪನ್ನಗಳ ಮೇಲಿನ ದರ ಇಳಿಕೆ, ಹಾಲು & ಮೊಸರಿನ ದರ ಯಥಾಸ್ಥಿತಿ: ಬಿ. ಶಿವಸ್ವಾಮಿ

Date:

Advertisements

ಕೇಂದ್ರ ಸರ್ಕಾರ ಶೇ.12ರಿಂದ 5ಕ್ಕೆ ಜಿಎಸ್​​ಟಿ ಕಡಿತ ಮಾಡಿದ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಕೆಎಂಎಫ್​​ ತನ್ನ ನಂದಿನಿ ಹಾಲಿನ ಕೆಲವು ಉತ್ಪನ್ನಗಳ ಮೇಲಿನ ದರ ಇಳಿಕೆ ಮಾಡಿದೆ.

ಸೆ.22ರಿಂದ ಹೊಸ ದರ ಜಾರಿಗೆ ಬರಲಿದ್ದು, ಹಾಲು ಮತ್ತು ಮೊಸರಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ಅವರು ಶನಿವಾರ ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡಿದ್ದಾರೆ.

ಜಿಎಸ್​​ಟಿ ಸ್ಲ್ಯಾಬ್‌ಗಳ ಮತ್ತು ದರಗಳ ಕಡಿತ ಇಳಿಕೆ ಬೆನ್ನಲ್ಲೇ ದರ ಇಳಿಕೆಗೆ ವಿಚಾರಾವಗಿ ಕೆಎಂಎಫ್​ ಶುಕ್ರವಾರ ​ ಅಧಿಕಾರಿಗಳು ಸಭೆ ಮಾಡಿ ಹೊಸ ದರ ನಿಗದಿ ಮಾಡಿದ್ದಾರೆ. ಇಂದಿನ ಸುದ್ದಿಗೋಷ್ಠಿಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬುವುದನ್ನು ಕೆಎಂಎಫ್ ವ್ಯವಸ್ಥಾಪಕರು ವಿವರಿಸಿದ್ದಾರೆ.

“ಮಾರಾಟಗಾರರಿಗೆ ಹಳೆಯ ಉತ್ಪನ್ನಗಳನ್ನು ಹೊಸ ಪಟ್ಟಿಯಂತೆ ಮಾರಾಟ ಮಾಡಲು ಸೂಚಿಸಲಾಗಿದೆ. ಹಳೆಯ ದರದಲ್ಲಿ ಮಾರಾಟ ಮಾಡಿದರೆ ಸೂಕ್ತ ಕ್ರಮದ ಎಚ್ಚರಿಕೆ ನೀಡಲಾಗಿದೆ. ಹಾಲು ಮತ್ತು ಮೊಸರಿನ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ” ಎಂದು ವಿವರಿಸಿದರು.

2017ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಜಿಎಸ್​​ಟಿ ವಿಧಿಸಲಾಗಿತ್ತು. 2022 ರಲ್ಲಿ ಜಿಎಸ್​ಟಿಯನ್ನು ಶೇಕಡಾ 22ಕ್ಕೆ ಹೆಚ್ಚಿಸಲಾಗಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದೆ. ಇದು ಬೆಲೆ ಏರಿಕೆಯ ಬಿಸಿಯನ್ನು ಸ್ವಲ್ಪ ಪ್ರಮಾಣದಲ್ಲಿ ತಗ್ಗಿಸಿದೆ.

ನಂದಿನಿ ತುಪ್ಪ, ಬೆಣ್ಣೆ, ಚೀಸ್, ಕುರುಕು ತಿಂಡಿಗಳ ಮೇಲಿನ ಜಿಎಸ್‌ಟಿ ಶೇ.12 ರಿಂದ 5ಕ್ಕೆ ಮತ್ತು
ನಂದಿನಿ ಕುಕ್ಕಿಸ್, ಚಾಕೋಲೇಟ್ಸ್, ಐಸ್‌ಕ್ರೀಂ, ಇನ್ಸ್‌ಟಾಂಟ್ ಮಿಕ್ಸ್ ಮತ್ತು ಪ್ಯಾಕ್ಸ್ ನೀರಿನ ಮೇಲಿನ ಜಿಎಸ್‌ಟಿ ಶೇ.18 ರಿಂದ 5ಕ್ಕೆ ದರ ಇಳಿಸಿದೆ. ನಂದಿನಿ ಪನೀರ್ ಮತ್ತು ಯುಹೆಚ್‌ಟಿ ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಶೇ.5 ರಿಂದ 0. ರಂತೆ ಇಳಿಕೆ ಮಾಡಲಾಗಿದೆ.

WhatsApp Image 2025 09 20 at 12.21.44 PM 2

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X