ಚಾಮರಾಜನಗರ | ಅ.7 ರಂದು ಮಹರ್ಷಿ ವಾಲ್ಮೀಕಿ ಜಯಂತಿ; ಅರ್ಥಪೂರ್ಣ ಆಚರಣೆಗೆ ನಿರ್ಧಾರ

Date:

Advertisements

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ವರ್ಗ, ಇತರೆ ಜನಾಂಗದ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅಕ್ಟೋಬರ್.7 ರಂದು ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಸುವ ನಿರ್ಧಾರ ಕೈಗೊಂಡರು.

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಸಭೆಯಲ್ಲಿ ಹಾಜರಿದ್ದ ಸಮಾಜದ ಹಾಗೂ ವಿವಿಧ ಸಮುದಾಯಗಳ ಮುಖಂಡರ ಸಲಹೆ, ಅಭಿಪ್ರಾಯಗಳನ್ನು ಆಲಿಸಿ, ಕಾರ್ಯಕ್ರಮದ ಅಂಗವಾಗಿ ನಡೆಯುವ ಮೆರವಣಿಗೆಗೆ ಹೆಚ್ಚಿನ ಕಲಾತಂಡಗಳನ್ನು ನಿಯೋಜಿಸಬೇಕು.

ಮೆರವಣಿಗೆ ಆಕರ್ಷಣೀಯವಾಗಿರಬೇಕು. ಮಹರ್ಷಿ ವಾಲ್ಮೀಕಿ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಜ್ಯ ಹಾಗೂ ಜಿಲ್ಲಾಮಟ್ಟದ ಪ್ರಶಸ್ತಿಗೆ ಸಮುದಾಯದ ವ್ಯಕ್ತಿಗಳನ್ನು ಗುರುತಿಸಿ ಸಂಬಂಧಪಟ್ಟ ಇಲಾಖೆ ಶಿಫಾರಸು ಮಾಡಬೇಕು. ಕಾರ್ಯಕ್ರಮಕ್ಕೆ ವಾಲ್ಮೀಕಿಯವರ ಬಗ್ಗೆ ಸಂಪೂರ್ಣವಾಗಿ ಅರಿತಿರುವವರನ್ನು ಮುಖ್ಯ ಭಾಷಣಕಾರರನ್ನು ಆಯ್ಕೆ ಮಾಡಬೇಕು. ಮೆರವಣಿಗೆ ಸಾಗುವ ಬೀದಿಯ ಸ್ವಚ್ಚತೆ ಹಾಗೂ ತಳಿರು-ತೋರಣಗಳಿಂದ ಅಲಂಕಾರ ಮಾಡಬೇಕು ಎಂದು ಸಲಹೆ ನೀಡಿದರು.

ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳು ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವವರನ್ನು ಕಾರ್ಯಕ್ರಮದಲ್ಲಿ ಗೌರವಿಸಬೇಕು. ಎಲ್ಲಾ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿರಬೇಕು. ಕೆಲ ಕಚೇರಿಗಳಲ್ಲಿ ವಾಲ್ಮೀಕಿಯವರ ಭಾವಚಿತ್ರ ಇಲ್ಲವಾಗಿದೆ.

ಎಲ್ಲಾ ಸರ್ಕಾರಿ ಕಚೇರಿಗಳಲಿ, ಆಸ್ಪತ್ರೆಗಳಲ್ಲಿ ವಾಲ್ಮೀಕಿಯವರ ಭಾವಚಿತ್ರ ಇಟ್ಟು ಗೌರವ ಸಲ್ಲಿಸಬೇಕು. ಮುಂದಿನ ವರ್ಷದ ಜಯಂತಿ ಕಾರ್ಯಕ್ರಮದ ವೇಳೆಗೆ ವಾಲ್ಮೀಕಿ ಪ್ರತಿಮೆ ಜಿಲ್ಲಾಡಳಿತ ಭವನದ ಅವರಣದಲ್ಲಿ ಪ್ರತಿಷ್ಠಾಪಿಸಬೇಕು. ಕಾರ್ಯಕ್ರಮ ನಡೆಯುವ ಅವಧಿಯಲ್ಲಿ ನಗರದಲ್ಲಿ ಮದ್ಯಪಾನ ನಿಷೇಧಿಸಬೇಕು. ಸೇರಿದಂತೆ ಇನ್ನಿತರೆ ಸಲಹೆ ಅಭಿಪ್ರಾಯಗಳನ್ನು ಜನಾಂಗದ ಮುಖಂಡರು ಸಭೆಯಲ್ಲಿ ತಿಳಿಸಿದರು.

ಸಮಾಜದ ಮುಖಂಡರ ಸಲಹೆ, ಅಭಿಪ್ರಾಯಗಳನ್ನು ಆಲಿಸಿ, ಸಮ್ಮತಿ ಸೂಚಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಅಕ್ಟೋಬರ್. 7 ರಂದು ಬಹಳ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗುವುದು. ಅಂದು ಬೆಳಿಗ್ಗೆ ನಗರದ ಪ್ರವಾಸಿ ಮಂದಿರದಿಂದ ಹೊರಡುವ ಮೆರವಣಿಗೆಯು ವರ್ಣರಂಜಿತ ಕಲಾತಂಡಗಳೊಡನೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಭುವನೇಶ್ವರಿ (ಪಚ್ಚಪ್ಪ) ವೃತ್ತದ ಪೇಟೆ ಪ್ರೈಮರಿ ಶಾಲೆಯಲ್ಲಿ ಅಂತ್ಯಗೊಳ್ಳಲಿದೆ. ಬಳಿಕ ಅಲ್ಲಿಯೇ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಶಿಷ್ಠಾಚಾರ ಪ್ರಕಾರವೇ ಮುದ್ರಿಸಿ ಎಲ್ಲಾ ಜನಪ್ರತಿನಿಧಿಗಳಿಗೂ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಮೆರವಣಿಗೆಯಲ್ಲಿ ಬೆಳ್ಳಿರಥದಲ್ಲಿ ವಾಲ್ಮೀಕಿಯವರ ಭಾವಚಿತ್ರ ಇರಿಸಿ, ಡೊಳ್ಳುಕುಣಿತ, ನಗಾರಿ ಪೂಜಾಕುಣಿತ, ಗೊರವರ ಕುಣಿತ, ನಾದಸ್ವರ, ಬೀಸುಕಂಸಾಳೆ ಸೇರಿದಂತೆ ಹೆಚ್ಚಿನ ಕಲಾತಂಡಗಳನ್ನು ನಿಯೋಜಿಸಲಾಗುವುದು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿಯೂ ವಾಲ್ಮೀಕಿಯವರ ಭಾವಚಿತ್ರವಿರಿಸಿ ಗೌರವ ಸಲ್ಲಿಸಬೇಕು. ಎಲ್ಲಾ ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.

ಎಲ್ಲಾ ಜನಪ್ರತಿನಿಧಿಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಮೆರವಣಿಗೆ ಸಾಗುವ ನಗರದ ರಸ್ತೆಗಳಲ್ಲಿ ಸ್ವಚ್ಚತೆ ಕಾಪಾಡಬೇಕು. ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಮಾಡಬೇಕು. ಮೆರವಣಿಗೆ ಸಾಗುವ ಹಾದಿ ತಳಿರು-ತೋರಣಗಳಿಂದ ಸಿಂಗಾರಗೊಳಿಸಬೇಕು. ಈಗಿನಿಂದಲೇ ಸಿದ್ದತಾ ಕಾರ್ಯಗಳನ್ನು ಕ್ಯಗೊಳ್ಳಬೇಕು. ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪಗಳಿಗೂ ಅವಕಾಶವಾಗದಂತೆ ಎಚ್ಚರ ವಹಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಕೊಳ್ಳೆಗಾಲ | ಸಾವಿತ್ರಿಬಾಯಿ ಫುಲೆ ನೆನಿಪಿಸಿಕೊಳ್ಳಿ; ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ : ಎ ಆರ್ ಕೃಷ್ಣಮೂರ್ತಿ

ನಗರಸಭೆ ಅಧ್ಯಕ್ಷರಾದ ಎಸ್. ಸುರೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್. ವಿ. ಚಂದ್ರು, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಿ. ಸಿ. ಶೃತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್. ಎಸ್. ಬಿಂದ್ಯಾ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಮುಖಂಡರಾದ ಸುರೇಶ್ ನಾಯಕ, ಕೆಲ್ಲಂಬಳ್ಳಿ ಸೋಮನಾಯಕ, ಅರಕಲವಾಡಿ ಸೋಮನಾಯಕ, ವಿರಾಟ್ ಶಿವು, ಚಾ.ಸಿ. ಸೋಮನಾಯಕ, ಬದನಗುಪ್ಪೆ ಶಿವರಾಮು, ಸಿ. ಎಂ. ಕೃಷ್ಣಮೂರ್ತಿ, ನಾಗೇಂದ್ರ, ಬದನಗುಪ್ಪೆ ನಾರಾಯಣ್, ಕೃಷ್ಣನಾಯಕ, ಪಾಳ್ಯ ಕೃಷ್ಣ, ಗುಂಡ್ಲುಪೇಟೆ ಮಲ್ಲೇಶ್, ಆರ್. ಸುಂದರ್, ಕಪನೀನಾಯಕ, ಯಜಮಾನ್ ರಾಜುನಾಯಕ, ರಮೇಶ್, ಬುಲೆಟ್ ಚಂದ್ರು, ಜಿ. ಬಂಗಾರು ಸೇರಿದಂತೆ ಇತರೆ ಮುಖಂಡರು, ವಿವಿಧ ಸಂಘಸಂಸ್ಥೆ ಪದಾಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X