ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ “ಪ್ರಸಕ್ತ ಪರಿಸ್ಥಿತಿ ಮತ್ತು ಪ್ರವಾದಿ ಸಂದೇಶ” ಎಂಬ ವಿಷಯದಲ್ಲಿ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 21ರ ಆದಿತ್ಯವಾರ ಸಂಜೆ 4 ಗಂಟೆಗೆ ನಗರದ ಯುನಿಟಿ ಹಾಲ್ ಹಂಗಳೂರಿನಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ದಿನೇಶ್ ಹೆಗ್ಡೆ, ಹೋಲಿ ರೋಸರಿ ಚರ್ಚ್ ನ ಧರ್ಮಗುರುಗಳಾದ ವಂದನೀಯ ರೆ.ಫಾ. ಪಾವ್ ರೇಗೊ, ಚೊಕ್ಕಬೆಟ್ಟು ಮಸೀದಿಯ ಧರ್ಮಗುರುಗಳಾದ ಮೌಲಾನ ಅಬ್ದುಲ್ ಅಝೀಝ್ ದಾರಿಮಿ, ಸಹಬಾಳ್ವೆ ಕುಂದಾಪುರ ಅಧ್ಯಕ್ಷರಾದ ರಾಮಕೃಷ್ಣ ಹೇರ್ಳೆ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಜ| ಮುಹಮ್ಮದ್ ಮೌಲಾ, ಕುಂದಾಪರ ತಾಲೂಕು ಅಧ್ಯಕ್ಷರಾದ ಎಸ್. ದಸ್ತಗೀರ್ ಕಂಡ್ಲರ್ ಆಗಮಿಸಿಲಿದ್ದಾರೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕುಂದಾಪುರ ತಾಲೂಕು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.