ಶಿವಮೊಗ್ಗ | ಸಮೀಕ್ಷೆಗೆ ಪ್ರೋತ್ಸಾಹಧನ ಘೋಷಿಸಿ, ಇಲ್ಲವೇ ನಮ್ಮನ್ನ ಕೈಬಿಡಿ ; ಆಶಾ ಕಾರ್ಯಕರ್ತೆಯರ ಮನವಿ

Date:

Advertisements

ಶಿವಮೊಗ್ಗ, ರಾಜ್ಯ ಸರ್ಕಾರ ಸೆ. 22ರಿಂದ ನಡೆಸಲಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಲ್ಲಿ ಭಾಗವಹಿಸದಿರಲು ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರು ನಿರ್ಣಯಿಸಿದ್ದಾರೆ .

ಈ ಕುರಿತಿ ನಿರ್ಣಯ ಪತ್ರವನ್ನು ಇಂದು ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಕಾರ್ಯಕರ್ತೆಯರು ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ, ಗ್ರಾಮೀಣ ಆಶಾ ಕಾರ್ಯಕರ್ತೆಯರಿಗೆ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಕೆಲಸಕ್ಕೆ 5000 ಮತ್ತು ನಗರ ಆಶಾ ಕಾರ್ಯಕರ್ತೆಯರಿಗೆ ಮನೆಗಳ ಸಂಖ್ಯೆ ಹೆಚ್ಚು ಇರುವುದರಿಂದ 10,000 ಕ್ಕೆ ಕಡಿಮೆ ಇರದಂತೆ ಗೌರವಧನ ನಿಗದಿ ಮಾಡಿದರೆ ಮಾತ್ರ ಕೆಲಸಕ್ಕೆ ಹಾಜರಾಗುವುದಾಗಿಯೂ ಇಲ್ಲವಾದಲ್ಲಿ ಸಮೀಕ್ಷೆ ಹಾಜರಾಗದಿರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು .

ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಈ ಹಿಂದೆ ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಯ ಸಮೀಕ್ಷೆ ಮಾಡಿರುವುದಕ್ಕೆ ಕೊಡಬೇಕಾಗಿದ್ದ 1೦೦0 ಗೌರವಧನವನ್ನು ಇನ್ನೂ ಕೊಟ್ಟಿಲ್ಲ. ಕೂಡಲೇ ಈ ಬಾಕಿಯನ್ನು ನೀಡಬೇಕು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಮಾಡಿದ ಆಶಾ ಕಾರ್ಯಕರ್ತೆಯರಿಗೂ ನಿಗದಿಯಾಗಿದ್ದ ಬಾಕಿ ಸಂಭಾವನೆ ನೀಡಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಆಶಾ ಕಾರ್ಯಕರ್ತರಿಂದ ಕೆಲಸವನ್ನು ಪಡೆಯುತ್ತಿದೆ.

ಆದರೆ ಗೌರವ ಧನವನ್ನು ಘೋಷಿಸಿಯೂ ಒಂದು ಪೈಸೆಯನ್ನೂ ನೀಡಿಲ್ಲ. ಅದೇ ರೀತಿ ಇತರ ಇಲಾಖೆಗಳಿಂದ ಮಾಡಿಸಿಕೊಂಡ ಹಲವಾರು ಸಮೀಕ್ಷೆಗಳಿಗೂ ಸೂಕ್ತ ಸಂಭಾವನೆ ದೊರೆತಿಲ್ಲ. ಏಪ್ರಿಲ್ ಒಂದರಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10,000 ಗ್ಯಾರಂಟಿ ಗೌರವ ಧನ ಎಂದು ಭರವಸೆ ನೀಡಿದ್ದರು.

ಈ ವರ್ಷದ ಬಜೆಟ್ ನಲ್ಲಿ ಅಂಗನವಾಡಿ ಬಿಸಿಯೂಟ ಕಾರ್ಯಕರ್ತೆಯರಿಗೆ 1000 ಹೆಚ್ಚಳ ಮಾಡಿ ಆಶಾ ಕಾರ್ಯಕರ್ತರಿಗೆ ಮಾತ್ರ 1000 ಹೆಚ್ಚಿಸಿಲ್ಲ ಎಂದರು.

ಸರ್ಕಾರದ ಅಧಿಕೃತ ಆದೇಶದಲ್ಲಿ ಸರ್ವೆ ಮಾಡುವಷ್ಟು ದಿನಗಳ ಕಾಲ ಚಟುವಟಿಕೆ ಆಧಾರಿತ ಪ್ರೋತ್ಸಾಹ ಧನಕ್ಕೂ ಕುತ್ತುಬರುತ್ತದೆ. ಇದರಿಂದ ಸ್ವಂತ ಹಣವನ್ನು ಖರ್ಚು ಮಾಡಿಕೊಂಡು ಬರಿಗೈಯಲ್ಲಿ ಮನೆಗೆ ಹೋಗುವ ಪರಿಸ್ಥಿತಿ ಬರಲಿದೆ. ಈ ಎಲ್ಲ ಕಾರಣಗಳಿಂದ ಗೌರವಧನ ಇಲ್ಲದೆ ಸರ್ವೆ ಕೆಲಸ ಮಾಡದಿರಲು ಎಲ್ಲಾ ಜಿಲ್ಲೆಗಳ ಕಾರ್ಯಕರ್ತರು ನಿರ್ಣಯ ಮಾಡಿದ್ದಾರೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರು ಪ್ರೋತ್ಸಾಹಧನ ಆಧಾರಿತ ಕೆಲಸ ಮಾಡುವವರಾದ್ದರಿಂದ ಈ ಸರ್ವೇ ದಿನಗಳಲ್ಲಿ ಅವರ ಕೆಲಸಗಳಿಗೆ ಹೆಚ್ಚುವರಿ ಕೆಲಸ ಆಗುವುದಿಲ್ಲವೇ ಎಂದು ಪ್ರಶ್ನಿಸಿದ ಅವರು, ಕೂಡಲೇ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದಲ್ಲಿ ಮಾತ್ರ ಸಮೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಮನವಿ ಸಲ್ಲಿಕೆ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ರೇಣುಕಾ, ಸರಸ್ವತಿ, ಕಾರ್ಯಕರ್ತೆರಾದ ಅನ್ನಪೂರ್ಣ, ರೂಪಾ, ಯಾಸ್ಮಿನ್, ಹೀನಾ, ಕೆ.ಎನ್. ಗಾಯತ್ರಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X