ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶನಿವಾರ ಪೂರ್ಣಗೊಂಡಿದೆ. ಒಟ್ಟು 164 ನಾಮಪತ್ರಗಳು ದಾಖಲಾಗಿದ್ದು, ಚುನಾವಣಾ ವಾತಾವರಣ ತೀವ್ರ ಕುತೂಹಲ ಮೂಡಿಸಿದೆ.
ಈ ಬಾರಿ ಸಂಘದ ಚುನಾವಣೆಯು ಜಿಲ್ಲೆಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಂಸದ ರಮೇಶ್ ಕತ್ತಿ ಪರ-ವಿರೋಧ ಬಣಗಳ ಬಲಪರೀಕ್ಷೆಯಾಗಿ ಪರಿಣಮಿಸಿದೆ.
ಚುನಾವಣೆ ಪ್ರಕ್ರಿಯೆಯಂತೆ, ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 22ರ ವರೆಗೆ ನಾಮಪತ್ರ ವಾಪಸ್ ಪಡೆಯುವ ಅವಕಾಶ ನೀಡಲಾಗಿದೆ ಎಂದು ಚಿಕ್ಕೋಡಿ ಎಸಿ ಸುಭಾಷ ಸಂಪಗಾಂವಿ ತಿಳಿಸಿದ್ದಾರೆ.
ಮತದಾನ ಸೆಪ್ಟೆಂಬರ್ 28ರಂದು ನಡೆಯಲಿದ್ದು, ಫಲಿತಾಂಶದತ್ತ ಜಿಲ್ಲೆಯ ರಾಜಕೀಯ ಕಣ್ಣು ನೆಟ್ಟಿದೆ.