ಬಾಗೇಪಲ್ಲಿ | ಗಣತಿದಾರರಿಗೆ ತರಬೇತಿ: ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ

Date:

Advertisements

ರಾಜ್ಯ ಸರ್ಕಾರದ ನಿರ್ದೇಶನದಂತೆ ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧತೆ ಮಾಡಿಕೊಂಡಿದ್ದು, ಪ್ರತಿ ಗಣತಿದಾರನಿಗೆ 150 ಮನೆಗಳ ಜವಾಬ್ದಾರಿ ವಹಿಸಿದೆ ಎಂದು ಬಾಗೇಪಲ್ಲಿ ತಹಶೀಲ್ದಾರ್ ಮನೀಷಾ ಎನ್ ಪತ್ರಿ ತಿಳಿಸಿದರು.

ಪಟ್ಟಣದ ನ್ಯಾಷನಲ್ ಪದವಿಪೂರ್ವ ಕಾಲೇಜಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಪಟ್ಟಂತೆ ಶನಿವಾರ ಹಮ್ಮಿಕೊಂಡಿದ್ದ ಗಣತಿದಾರರಿಗೆ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

“ಇದೊಂದು ರಾಜ್ಯ ಸರ್ಕಾರದ ಮಹತ್ವದ ಕೆಲಸ. ಎಲ್ಲ ಗಣತಿದಾರರು ತಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಬೇಕು. ರಾಜ್ಯ ಸರ್ಕಾರದ ಆದೇಶದಂತೆ ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ. ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲಾಗುತ್ತಿದೆ. ಹೀಗಾಗಿ, ತಾಲೂಕು ಮಟ್ಟದ ಅಧಿಕಾರಗಳಿಗೆ ತರಬೇತಿ ನೀಡಲಾಗಿದೆ. ಅವರುಗಳಿಗೆ ಅಗತ್ಯ ಕೈಪಿಡಿ ಮತ್ತು ಆ್ಯಪ್ ಬಗ್ಗೆಯೂ ತಿಳಿಸಲಾಗಿದೆ” ಎಂದರು.

“ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಬಹುತೇಕ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿದ್ದಾರೆ. ಪ್ರತಿ ಗಣತಿದಾರರು ಸುಮಾರು 150 ಮನೆಗಳಿಗೆ ಸಮಿಕ್ಷೆ ಮಾಡಬೇಕಾಗಿದೆ. ಈ ಸಮೀಕ್ಷೆ ನಿಗದಿತ ಅವಧಿಯೊಳಗೆ ಮುಗಿಸಬೇಕು. ಗಣತಿದಾರರು ಕೇಳುವ 60 ಪ್ರಶ್ನೆಗಳಿಗೆ ಉತ್ತರ ನೀಡುವಂತೆ ಆಶಾ ಕಾರ್ಯಕರ್ತೆಯರ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ” ಎಂದು ಹೇಳಿದರು.

“ಪ್ರತಿ ಹತ್ತು ವರ್ಷಗಳಿಗೊಮ್ಮೆ ಗಣತಿಯು ನಡೆಯುತ್ತದೆ. 2011ರ ನಂತರ ಯಾವುದೇ ಗಣತಿ ಆಗಿಲ್ಲ. ಹೀಗಾಗಿ, ಸರ್ಕಾರ ಎಲ್ಲ ಇಲಾಖೆಗಳಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ರೂಪಿಸುವುದಕ್ಕಾಗಿ ಈ ಸಮೀಕ್ಷೆ ನಡೆಸುತ್ತಿದೆ. ಈ ಸಮೀಕ್ಷೆಯು ಆ್ಯಪ್ ಮೂಲಕ ಪ್ರತಿ ಕುಟುಂಬದ ಮಾಹಿತಿಯನ್ನು, ದತ್ತಾಂಶಗಳನ್ನು ಸಂಗ್ರಹ ಮಾಡಲಾಗುತ್ತಿದೆ. ಒಮ್ಮೆ ದಾಖಲಿಸಿದ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶ ಇರುವುದಿಲ್ಲ. ಹೀಗಾಗಿ, ಜನರು ಸರಿಯಾದ ಮಾಹಿತಿ ನೀಡಬೇಕು. ಗಣತಿದಾರರೂ ಕೂಡ ಸೂಕ್ತ ಮಾಹಿತಿಯನ್ನು ದಾಖಲಿಸಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? BREAKING | ಆಳಂದ ಮತದಾರರ ಹೆಸರು ಕೈಬಿಟ್ಟ ಪ್ರಕರಣ: ಹಿರಿಯ ಐಪಿಎಸ್ ಅಧಿಕಾರಿ ಬಿ ಕೆ ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ತಂಡ ರಚನೆ

ಈ ಸಂದರ್ಭದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಆರ್ ಶಿವಪ್ಪ, ಬಿಇಒ ವೆಂಕಟೇಶಪ್ಪ, ಸಮನ್ವಯ ಅಧಿಕಾರಿಗಳಾದ ವೆಂಕಟರಾಮ್, ಆದರ್ಶ ಕಾಲೇಜು ಪ್ರಾಂಶುಪಾಲ ನಂಜಿರೆಡ್ಡಿ, ನ್ಯಾಷನಲ್ ಕಾಲೇಜು ಪ್ರಾಂಶುಪಾಲರಾದ ವೆಂಕಟೇಶಿವಾರೆಡ್ಡಿ, ಲಲಿತಮ್ಮ, ಡಾ. ಕೃಷ್ಣಮೂರ್ತಿ, ನೋಡಲ್ ಅಧಿಕಾರಿಗಳಾದ ಪಿ ಎನ್ ನಾರಾಯಣ ಸ್ವಾಮಿ, ಬಿ ಆರ್ ಪಿ ಶಿವಪ್ಪ, ಬಿಸಿಎಂ ಇಲಾಖೆ ವೆಂಕಟೇಶ್, ನರಸಿಂಹಪ್ಪ, ರಾಮಚಂದ್ರ ಸೇರಿದಂತೆ ಹಲವಾರು ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X