ರಾಜ್ಯದ ಅರ್ಹ ಪಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಿಸಲು ಸರ್ಕಾರಕ್ಕೆ ಮನವಿ: ವಿ ಎಂ ಮುನಿಯಪ್ಪ

Date:

Advertisements

ಕೆಲವು ಕಾರಣಾಂತರಗಳಿಂದ ಅರ್ಹ ಪಲಾನುಭವಿಗಳು ರೇಷನ್ ಕಾರ್ಡ್ ಮಾಡಿಸಲು ಸಾಧ್ಯವಾಗಿಲ್ಲ. ಕೂಡಲೇ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರಿಗೆ ಪತ್ರ ಬರೆದು ರಾಜ್ಯಾದ್ಯಂತ ರೇಷನ್ ಕಾರ್ಡ್ ಮಾಡಿಕೊಳ್ಳಲು ಅವಕಾಶ ನೀಡುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಲಾಗುವುದು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ ಎಂ ಮುನಿಯಪ್ಪ ಹೆಳಿದರು.

ಕೋಲಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಯೋಜನೆಯು ಎಲ್ಲ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸಬೇಕು” ಎಂದರು.

“ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಯೊಂದು ಇಲಾಖೆಯ ಮುಂದೆ ಪ್ರಚಾರದ ನಾಮಫಲಕಗಳನ್ನು ಅಳವಡಿಸಬೇಕು. ಬಡಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿದೆ. ಎಲ್ಲರ‌ ಮನೆಗೆ ತಲುಪುವಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಲಕಾಲಕ್ಕೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಮಸ್ಯೆ ಇದ್ದರೆ ಕೂಡಲೇ ಬಗೆಹರಿಸಬೇಕು” ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ, “ಸರ್ಕಾರದ ಯೋಜನೆಗಳು ಅರ್ಹ ಪಲಾನುಭವಿಗಳಿಗೆ ತಲುಪಬೇಕು. ಇದರಲ್ಲಿ ಲೋಪ ದೋಷಳಾದರೆ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತದೆ. ಜನರಿಗೆ ತೊಂದರೆ ಕೊಡುವ ಪಡಿತರ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ತೂಕ ಮತ್ತು ಅಳತೆಯಲ್ಲಿ ವ್ಯತ್ಯಾಸವಾಗದಂತೆ ಕ್ರಮ ವಹಿಸಬೇಕು. ಕೋಲಾರ ನಗರ ಸಾರಿಗೆ ಬಗ್ಗೆ ಪ್ರಚಾರಾಂದೋಲನ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಅನುಕಂಪದ ಆಧಾರದ ಮೇಲೆ ನೀಡುವ ಗ್ರೂಪ್ ‘ಡಿ’ ಹುದ್ದೆಗೆ ಮರಣ ಶಾಸನ ಬರೆದ ಕರ್ನಾಟಕ ಸರಕಾರ: ಮುತ್ತು ಬಿಳಿಯಲಿ 

ಸಭೆಯಲ್ಲಿ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ಅನುಷ್ಠಾನ ವರದಿ ಮಂಡಿಸಿ, ಅದರ ಸಾಧಕ ಬಾಧಕಗಳ ಚರ್ಚೆಗಳ ಜತೆಗೆ ಎಲ್ಲ ಹಂತದಲ್ಲಿಯೂ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೊನ್ಮುಖರಾಗಿದ್ದಾರೆಯೇ ಎಂಬುದರ ಕುರಿತು ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥ್, ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಇದಾಹಿತ್ ಉಲ್ಲಾ ಷರೀಫ್, ತಾಲೂಕು ಪ್ರಾಧಿಕಾರ ಸಮಿತಿ ಸದಸ್ಯರು, ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

Download Eedina App Android / iOS

X