ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್; ಗುಜರಾತ್‌ನಲ್ಲಿ ಹಿಂಸಾಚಾರ

Date:

Advertisements

ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದ್ದ ಪ್ರಚೋದನಕಾರಿ ಪೋಸ್ಟ್‌ನಿಂದಾಗಿ ಹಿಂಸಾಚಾರ ನಡೆದಿದ್ದು, ಸುಮಾರು 50 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ.

ಕೆಲವು ಕಿಡಿಗೇಡಿಗಳು ಇಸ್ಲಾಂ ಧರ್ಮವನ್ನು ಅಪಮಾನಿಸುವ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಪೋಸ್ಟ್‌ಅನ್ನು ಗಮನಿಸಿದ ಮುಸ್ಲಿಂ ಮುಖಂಡರು ವಡೋದರಾ ಪೊಲೀಸ್‌ ಠಾಣೆಯ ಎದುರು ಜಮಾಯಿಸಿ, ಪ್ರತಿಭಟನೆ ನಡೆಸಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದರು.

ಇದೇ ವೇಳೆ, ಮತ್ತೊಂದು ಸಮುದಾಯದ ಕೆಲವು ಕೋಮುವಾದಿ ಪುಂಡರು ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪರಿಣಾಮವಾಗಿ, ಹಿಂಸಾಚಾರ ಭುಗಿಲೆದ್ದಿದೆ. ಆದಾಗ್ಯೂ, ಪೊಲೀಸರು ಪರಿಸ್ಥಿತಿಯನ್ನು ಶೀಘ್ರವೇ ನಿಯಂತ್ರಣಕ್ಕೆ ತಂದಿದ್ದಾರೆ ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಮೋದಿ ಈಗ ‘ಭಯೋತ್ಪಾದಕರು ಅಳುತ್ತಿದ್ದಾರೆ’ ಎಂದು ಹೇಳುತ್ತಿರುವುದೇಕೆ?

ಕಲ್ಲು ತೂರಾಟದಲ್ಲಿ ಪೊಲೀಸ್ ಸಿಬ್ಬಂದಿಗಳಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಜುನಿಗಢೀ ಪ್ರದೇಶದಲ್ಲಿನ ವಾಹನಗಳನ್ನು ಕೆಲವು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ ಎಂದು ವಡೋದರಾ ನಗರ ಉಪ ಪೊಲೀಸ್ ಆಯುಕ್ತ (4ನೇ ವಲಯ) ಆ್ಯಂಡ್ರ್ಯೂ ಮ್ಯಾಕ್ವಾನ್ ತಿಳಿಸಿದ್ದಾರೆ.

ಘಟನೆ ಸಂಬಂಧಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಒಂದು; ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಾಕಿದವನ ವಿರುದ್ಧ ದಾಖಲಾಗಿದ್ದರೆ, ಮತ್ತೊಂದು;ಹಿಂಸಾಚಾರದಲ್ಲಿ ಭಾಗಿಯಾಗಿದ್ದವರ ವಿರುದ್ಧ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ...

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

ಎಲ್ಲರ ತಾಯಿ ಸಾಯುತ್ತಾರೆ; ರಜೆ ಕೇಳಿದ್ದಕ್ಕೆ ಮೇಲಧಿಕಾರಿಯ ಉಡಾಫೆಯ ಉತ್ತರ

ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ರಜೆ ಕೇಳಿದ ಬ್ಯಾಂಕ್ ಉದ್ಯೋಗಿಗೆ, “ಎಲ್ಲರ ತಾಯಿ...

Download Eedina App Android / iOS

X