ವ್ಯಕ್ತಿಯೋರ್ವನನ್ನು ವಿವಸ್ತ್ರಗೊಳಿಸಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಲೆಪ್ರಸಿ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಲೆಪ್ರಸಿ ಕಾಲೋನಿಯ ನಿವಾಸಿ ಚಾಂದಸಾಬ್ ಮಲ್ಲಂಗಸಾಬ್ ಮೂಲಗೆ(38) ಎಂದು ಗುರುತಿಸಲಾಗಿದ್ದು, ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಸಂತೆಕಟ್ಟೆ ಬಳಿ ಬಸ್ ಮತ್ತು ಕಾರು ಡಿಕ್ಕಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್ ಡಿ, ಡಿಸಿಪಿ ಕನಿಕಾ ಸಿಕ್ರಿವಾಲ್, ಆರ್ ಜಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದುಬಂದಿದೆ.
ಈ ಕುರಿತು ಆರ್ ಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.