ತ್ರಿಪುರ | ಮಹಿಳೆಯ ಅರ್ಧ ಸುಟ್ಟ ಶವ ಪತ್ತೆ; ಬಿಜೆಪಿ ಶಾಸಕನ ಆಪ್ತರ ವಿರುದ್ಧ ಆರೋಪ – ನಾಲ್ವರ ಬಂಧನ

Date:

Advertisements

ಅರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ತ್ರಿಪುರಾದ ಗೋಮತಿ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಆಕೆಯ ಮೇಲೆ ಬಿಜೆಪಿ ಶಾಸಕನ ಸಹಚರರು ಆಕೆಯ ಮೇಲೆ ದೌರ್ಜನ್ಯ ಎಸಗಿದ್ದು, ಆಕೆಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಮಹಿಳೆಯ ಪತಿ ಆರೋಪಿಸಿದ್ದಾರೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗೋಮತಿ ಜಿಲ್ಲೆಯ ಕಾಕರಾಬನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಿರ್ಜಾದಲ್ಲಿ ಘಟನೆ ನಡೆದಿದೆ. ಘಟನೆಯ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಕಾಕ್ರಬನ್-ಸಲ್ಗಢ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಿತೇಂದ್ರ ಮಜುಂದರ್ ಅವರ ಸೋದರಳಿಯ ಮನ್ನಾ ಮಜುಂದರ್ ಸೇರಿದಂತೆ ಮೂವರುಶುಕ್ರವಾರ ರಾತ್ರಿ ಮಹಿಳೆ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆಕೆಯ ಪತ್ನಿ ಆರೋಪಿಸಿದ್ದಾರೆ.

ಆದಾಗ್ಯೂ, ಮೃತ ಮಹಿಳೆಯ ಪತಿ ನೀಡಿದ ದೂರನ್ನು ಸ್ವೀಕರಿಸಲು ಪೊಲೀಸರು ಆರಂಭದಲ್ಲಿ ನಿರಾಕರಿಸಿದ್ದರು ಎಂದು ಆರೋಪಿಸಲಾಗಿದೆ. ಪರಿಣಾಮ, ಪೊಲೀಸ್ ಅಧಿಕಾರಿ ಒಬ್ಬರನ್ನು ಅಮಾನತು ಮಾಡಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹಣಕಾಸು ಸಚಿವ ಪ್ರಣಜಿತ್ ಸಿಂಘಾ ರಾಯ್ ಭರವಸೆ ನೀಡಿದ್ದಾರೆ.

ಘಟನೆ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಮಾಣಿಕ್ ಸಹಾ, “ಮಿರ್ಜಾನಲ್ಲಿ ನಡೆದ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಈ ಘೋರ ಅಪರಾಧದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?; ಮೋದಿ ಈಗ ‘ಭಯೋತ್ಪಾದಕರು ಅಳುತ್ತಿದ್ದಾರೆ’ ಎಂದು ಹೇಳುತ್ತಿರುವುದೇಕೆ?

“ಆರಂಭದಲ್ಲಿ ನಾವು ಅಸಹಜ ಸಾವು ಎಂದು ಪ್ರಕರಣವನ್ನು ದಾಖಲಿಸಿದ್ದೆವು. ನಂತರ, ಆಕೆಯ ಸಾವಿಗೆ ಕಾರಣರಾದವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಅಡಿಉಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ತನಿಖೆ ನಡೆಯುತ್ತಿದೆ. ತನಿಖೆಯ ವೇಳೆ ಅಧಿಕ ಮಾಹಿತಿ ದೊರೆತರೆ, ಅದರ ಆಧಾರದ ಮೇಲೆ ಬಿಎನ್‌ಎಸ್ ಅಡಿಯಲ್ಲಿ ಹೆಚ್ಚಿನ ಸೆಕ್ಷನ್‌ಗಳನ್ನು ಸೇರಿಸಲಾಗುವುದು” ಎಂದು ಉದೈಪುರದ ಎಸ್‌ಡಿಪಿಒ ದೇಬಾಂಜಲಿ ರೇ ತಿಳಿಸಿದ್ದಾರೆ.

ಘಟನೆ ಬಗ್ಗೆ ಪ್ರಕ್ರಿಯಿಸಿರುವ ಸಂತ್ರಸ್ತೆಯ ಪತಿ, “ನನ್ನ ಪತ್ನಿಯನ್ನು ಶಾಸಕರ ಸಹಚರರು ಶುಕ್ರವಾರ ರಾತ್ರಿ ಅಮಾನುಷವಾಗಿ ಥಳಿಸಿದ್ದಾರೆ. ಪ್ರಕರಣ ಸಂಬಂಧ ನಾವು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದೆವು. ಆದರೆ, ಪೊಲೀಸರು ದೂರು ಸ್ವೀಕರಿಸಲಿಲ್ಲ. ಹೀಗಾಗಿ, ಮನೆಗೆ ಹಿಂದಿರುಗಿದೆವು. ರಾತ್ರಿ ಮಲಗಿದ್ದೆವು. ಬೆಳಗ್ಗೆ ಎದ್ದು ನೋಡಿದಾಗ, ನನ್ನ ಪತ್ನಿಯ ಅರ್ಧ ಸುಟ್ಟ ದೇಹ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. ನನ್ನ ಪತ್ನಿ ಸಾವಿಗೆ ಬಿಜೆಪಿ ಶಾಸಕನ ಸೋದರ ಅಳಿಯ ಮನ್ನಾ ಮಜುಂದರ್ ಮತ್ತು ಆತನ ಇಬ್ಬರು ಸಹಚರರು ಕಾರಣ” ಎಂದು ಆರೋಪಿಸಿದ್ದಾರೆ.

ಘಟನೆ ಬಳಿಕ ಬಿಜೆಪಿ ಶಾಸಕ ಜಿತೇಂದ್ರ ಮಜುಂದರ್ ಪತ್ರಕರ್ತರ ಸಂಪರ್ಕಕ್ಕೆ ದೊರೆತಿಲ್ಲ. ಘಟನೆ ಬಗ್ಗೆ ಅವರು ಪ್ರತಿಕ್ರಿಯಿಸಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

Download Eedina App Android / iOS

X