ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಯಲ್ಲಮ್ಮ ದೇವಿ ದೇವಸ್ಥಾನದ ನದಿಯ ದಡದಲ್ಲಿ ಬಟ್ಟೆ ತೊಳೆಯುವ ವೇಳೆ ಆಕಸ್ಮಿಕವಾಗಿ ನೀರುಪಾಲಾಗಿರುವ ಯುವಕ ಮಣೂರ ಗ್ರಾಮದ ನಿವಾಸಿ ಭಾಗೇಶ್ ರೇವಣಸಿದ್ದಪ್ಪ(20) ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಿವಸ್ತ್ರಗೊಳಿಸಿ ವ್ಯಕ್ತಿಯ ಕೊಲೆ: ಹಳೆಯ ವೈಷಮ್ಯ ಶಂಕೆ
ಅಫಜಲಪುರ ಪೊಲೀಸರು ಸೇರಿದಂತೆ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಯುವಕನನ್ನು ಪತ್ತೆಹಚ್ಚಲು ಶೋಧ ಕಾರ್ಯಚರಣೆ ನಡೆಸುತ್ತಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.