ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಎಕ್ಸ್‌ ಖಾತೆ ಹ್ಯಾಕ್: ಪಾಕ್, ಟರ್ಕಿ ಧ್ವಜಗಳ ಚಿತ್ರ ಪೋಸ್ಟ್‌

Date:

Advertisements

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಎಕ್ಸ್‌ ಖಾತೆಯನ್ನು ಭಾನುವಾರ ಹ್ಯಾಕ್ ಮಾಡಲಾಗಿದೆ. ಹ್ಯಾಕರ್‌ಗಳು ಪಾಕಿಸ್ತಾನ ಮತ್ತು ಟರ್ಕಿ ಧ್ವಜಗಳ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಏಷ್ಯಾ ಕಪ್‌ ಎರಡನೇ ಪಂದ್ಯ ನಡೆಯಲಿರುವ ಮುನ್ನ ಹ್ಯಾಕರ್‌ಗಳು ಈ ಕೃತ್ಯವನ್ನು ಎಸಗಿದ್ದಾರೆ. ಸದ್ಯ ಖಾತೆಯನ್ನು ಮತ್ತೆ ನಿಯಂತ್ರಣಕ್ಕೆ ಪಡೆದು ಪೋಸ್ಟ್ ಡಿಲೀಟ್ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತೆ ತೋರಿಸಿ: ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

“ನಾವು ತಕ್ಷಣ ಸೈಬರ್ ಅಪರಾಧ ಪೊಲೀಸರಿಗೆ ಎಚ್ಚರಿಕೆ ನೀಡಿದ್ದೇವೆ. ಉಪಮುಖ್ಯಮಂತ್ರಿಗಳ ಎಕ್ಸ್‌ ಖಾತೆಯ ನಿಯಂತ್ರಣ ಹೊಂದಿರುವ ನಮ್ಮ ತಂಡವು ನಂತರ ಖಾತೆಯನ್ನು ಮತ್ತೆ ತಮ್ಮ ನಿಯಂತ್ರಣಕ್ಕೆ ಪಡೆದುಕೊಂಡಿದೆ. ಸುಮಾರು 30ರಿಂದ 45 ನಿಮಿಷಗಳ ಸಮಯ ತೆಗೆದುಕೊಂಡಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

Download Eedina App Android / iOS

X