ನಿತೀಶ್ ಕುಮಾರ್ ಪ್ರಾಮಾಣಿಕರಾಗಿರಬಹುದು, ಆದರೆ ಸಚಿವರು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ: ಪ್ರಶಾಂತ್ ಕಿಶೋರ್

Date:

Advertisements

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಾಮಾಣಿಕರಾಗಿರಬಹುದು. ಆದರೆ ಅವರ ಸಂಪುಟದ ಸಚಿವರು ಮತ್ತು ಅಧಿಕಾರಿಗಳು ರಾಜ್ಯದ ಜನರಿಂದ ಕೋಟಿಗಟ್ಟಲೆ ಲೂಟಿ ಮಾಡುತ್ತಿದ್ದಾರೆ ಎಂದು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ತಿಳಿಸಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ನಾಯಕರ ಮೇಲೆ ಸರಣಿ ವಾಗ್ದಾಳಿ ನಡೆಸುತ್ತಿರುವ ಪ್ರಶಾಂತ್ ಕಿಶೋರ್ ಈ ಬಗ್ಗೆ ಎನ್‌ಡಿಟಿವಿಗೆ ಪ್ರತಿಕ್ರಿಯಿಸಿದ್ದಾರೆ. “ಯಾವುದೇ ವ್ಯಕ್ತಿಯನ್ನು ಗುರಿಯಾಗಿಸುವ ಅಥವಾ ಕೇವಲ ಆರೋಪಗಳನ್ನು ಮಾಡುವ ರಾಜಕೀಯದಲ್ಲಿ ನಾನು ಯಾವುದೇ ನಂಬಿಕೆಯನ್ನು ಹೊಂದಿಲ್ಲ. ನಾನು ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಸುತ್ತಾಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪ್ರಧಾನಿ ಮೋದಿ ಪಾದ ಸ್ಪರ್ಶಿಸಿ ನಿತೀಶ್ ಕುಮಾರ್ ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

“ಹಿಂದೆಂದೂ ಇಷ್ಟೊಂದು ಭ್ರಷ್ಟಾಚಾರವನ್ನು ನೋಡಿಲ್ಲ ಎಂದು ಬಿಹಾರದ ಜನರು ಹೇಳುತ್ತಿದ್ದಾರೆ. ಸ್ಪಷ್ಟವಾಗಿ ಹೇಳುವುದಾದರೆ ಇವೆಲ್ಲವೂ(ಭ್ರಷ್ಟಾಚಾರ) ಮೇಲಿನಿಂದ ನಡೆಯುತ್ತಿದೆ. ನಿತೀಶ್ ಕುಮಾರ್ ಪ್ರಾಮಾಣಿಕರಾಗಿರಬಹುದು. ಆದರೆ ಸಚಿವರು ಮತ್ತು ಅಧಿಕಾರಿಗಳು ಜನರಿಂದ ಕೋಟಿಗಟ್ಟಲೆ ಲೂಟಿ ಮಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನು ಇತ್ತೀಚೆಗೆ ಪ್ರಶಾಂತ್ ಕಿಶೋರ್, “ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ಡಿ-ಲಿಟ್ ಪದವಿ ಮತ್ತು ಜನತಾ ದಳ (ಯುನೈಟೆಡ್) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಸಚಿವ ಅಶೋಕ್ ಚೌಧರಿ ಕಳೆದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. 200 ಕೋಟಿ ರೂ. ಮೌಲ್ಯದ ಭೂಮಿಯನ್ನು ಸಂಶಯಾಸ್ಪದ ಮತ್ತು ಕಾನೂನುಬಾಹಿರ ವಿಧಾನಗಳ ಮೂಲಕ ಖರೀದಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X