ಧಾರವಾಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಶಾ ಮುಕ್ತ ಭಾರತದ ಪರಿಕಲ್ಪನೆಯೊಂದಿಗೆ ಹುಬ್ಬಳ್ಳಿ ತೋಳನಕೆರೆಯಿಂದ “ನಮೋ ಯುವ ಓಟ” ಬೃಹತ್ ಮ್ಯಾರಾಥಾನ್ ಕಾರ್ಯಕ್ರಮ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕರೆಯಂತೆ ಸ್ವಸ್ಥ ಭಾರತ ನಿರ್ಮಾಣಕ್ಕಾಗಿ ಸಧೃಡ ಸಮಾಜದ ಅವಶ್ಯಕತೆಯಿದ್ದು, ಮಾದಕ ವಸ್ತುಗಳಿಂದ ದೂರವಿರುವ ನಿಟ್ಟಿನಲ್ಲಿ ಸಮಾಜ ಹಾಗೂ ಯುವ ಜನತೆಯನ್ನು ಜಾಗೃತಗೊಳಿಸುವ ಉದ್ದೇಶದಿಂದ ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸುದ್ಧಿ ಓದಿದ್ದೀರಾ? ಧಾರವಾಡ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿ ಕುಟುಂಬವೂ ಭಾಗವಹಿಸಲು ಜಿಲ್ಲಾಧಿಕಾರಿ ಕರೆ
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಶಾಸಕ ಅರವಿಂದ ಬೆಲ್ಲದ, ಹರೀಶ್ ಪೂಂಜ, ಕ್ರಿಕೆಟ್ ಆಟಗಾರ ವೆಂಕಟೇಶ ಪ್ರಸಾದ, ಚಿತ್ರನಟಿ ಹರ್ಷಿಕಾ ಪೂಣಚ್ಚ, ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮೇಯರ್ ಜ್ಯೋತಿ ಪಾಟೀಲ್, ಉಪ ಮೇಯರ್ ಸಂತೋಷ ಚವ್ಹಾಣ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೀತಮ್ ಅರಕೇರಿ, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.