ಏಷ್ಯಾಕಪ್ ಟಿ20 | ಪಾಕ್‌ ವಿರುದ್ಧ ಭಾರತಕ್ಕೆ ಭರ್ಜರಿ ಜಯ, No Handshake Policy ಮುಂದುವರಿಕೆ

Date:

Advertisements

ಏಷ್ಯಾಕಪ್ ಟೂರ್ನಿಯ 14ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲೂ ಪಾಕಿಸ್ತಾನ ತಂಡ ಮತ್ತೆ ಮುಜುಗರಕ್ಕೀಡಾಗಿದ್ದು, ಭಾರತ ತಂಡ ಮತ್ತೆ ತನ್ನ No HandShake policy ಮುಂದುವರೆಸಿದೆ.

ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ ಆರಂಭಿಕ ಜೋಡಿ ಅಭಿಷೇಕ್ ಶರ್ಮಾ ಮತ್ತು ಶುಭಮನ್ ಗಿಲ್ ಅವರ ಅಬ್ಬರದ ಜೊತೆಯಾಟಕ್ಕೆ ಪಾಕಿಸ್ತಾನ ತಂಡವು ಬೆಚ್ಚಿಬಿದ್ದಿತು. ಅಭಿಷೇಕ್ ಶರ್ಮಾ 39 ಎಸೆತಗಳಲ್ಲಿ 74 ರನ್ ಸಿಡಿಸಿದರು. ಈ ಮೂಲಕ ಭಾರತ ತಂಡವು 18.5 ಓವರ್​ಗಳಲ್ಲಿ 174 ರನ್ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಗುಂಪು ಹಂತದ ಪಂದ್ಯದಲ್ಲಿಯೂ ಭಾರತದ ಆಟಗಾರರು ಪಾಕ್ ತಂಡದ ಆಟಗಾರರಿಗೆ ಕೈಕುಲುಕಿರಲಿಲ್ಲ. ಅದು ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಭಾನುವಾರ ನಡೆದ ಸೂಪರ್ ಫೋರ್ ಪಂದ್ಯದ ಟಾಸ್ ಸಂದರ್ಭದಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಮ್ಯಾಚ್ ರೆಫರಿ ಆ್ಯಂಡಿ ಪೈಕ್ರಾಫ್ಟ್ ಅವರ ಕೈಕುಲುಕಿದರು. ಆದರೆ ಪಾಕ್ ತಂಡದ ನಾಯಕ ಸಲ್ಮಾನ್ ಆಘಾ ಅವರಿಗೆ ಹಸ್ತಲಾಘವ ನೀಡಲಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಭಾರತ ತಂಡ ಈ ನಿರ್ಧಾರ ತೆಗೆದುಕೊಂಡಿದೆ.

ಭರ್ಜರಿ ಗೆಲುವಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಇನ್ಮುಂದೆ ಉಭಯ ತಂಡಗಳ ನಡುವಣ ಜಿದ್ದಾಜಿದ್ದಿನ ಪೈಪೋಟಿ ಬಗ್ಗೆ ಪ್ರಶ್ನೆ ಕೇಳದಂತೆ ಮನವಿ ಮಾಡಿದರು. ಇದಕ್ಕೆ ಕಾರಣ ಕೊಟ್ಟ ಅವರು, “ಭಾರತ ತಂಡವು ಪಾಕ್ ವಿರುದ್ಧ ಏಕಪಕ್ಷೀಯವಾಗಿ ಪಂದ್ಯ ಗೆಲ್ಲುತ್ತಿದೆ. ಇಲ್ಲಿ ಪ್ರತಿಸ್ಪರ್ಧೆ ಅಥವಾ ಪೈಪೋಟಿ ಎಂಬುದೇ ಇಲ್ಲ. ಪ್ರತಿ ಸಲ ಏಕಪಕ್ಷೀಯವಾಗಿ ನಾವೇ ಗೆಲ್ಲುತ್ತಿರುವಾಗ, ಪೈಪೋಟಿಯ ಮಾತೇ ಬರಲ್ಲ. ಹೀಗಾಗಿ ನೀವೆಲ್ಲರೂ ಈ ‘ಪೈಪೋಟಿ’ಯ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ನಿಲ್ಲಿಸಬೇಕು” ಎಂದು ಮಾಧ್ಯಮದವರನ್ನು ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

ಶೀತಲ್ ದೇವಿಗೆ ಐತಿಹಾಸಿಕ ಚಿನ್ನ; ವಿಶ್ವ ಪ್ಯಾರಾ ಆರ್ಚರಿಯಲ್ಲಿ ಭಾರತದ ಹೆಮ್ಮೆ

ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆದ ವಿಶ್ವ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

Asia CUP2025 | ‘ಸೂಪರ್ ಓವರ್’ ಪಂದ್ಯದಲ್ಲಿ ಲಂಕಾ ಮಣಿಸಿ, ಫೈನಲ್‌ಗೆ ಭಾರತ ಲಗ್ಗೆ

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಏಷ್ಯಾ ಕಪ್‌ ಕ್ರಿಕೆಟ್‌...

Download Eedina App Android / iOS

X