ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಸೆ.18ರಿಂದ ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಧರಣಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.
ಈ ವೇಳೆ ಅರವಿಂದ ಕುಲಕರ್ಣಿ ಮಾತನಾಡಿ, “ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವವರೆಗೂ ನಾವು ಧರಣಿ ಸತ್ಯಾಗ್ರಹ ಕೈಬಿಡುವುದಿಲ್ಲ. ಅದರಲ್ಲೂ ಪಿಪಿಪಿ ಮಾದರಿ ಕೈಬಿಟ್ಟು ಸಂಪೂರ್ಣವಾಗಿ ಸರ್ಕಾರಿ ಸ್ವಾಯತ್ತ ಕಾಲೇಜು ಸ್ಥಾಪನೆ ಮಾಡಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆ ಮುಂದುವರೆಯಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿರಿಯ ಪತ್ರಕರ್ತ ಅನಿಲ ಹೊಸಮನಿ ಮಾತನಾಡಿ, “ನಮ್ಮ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮೊದಲೇ ಸ್ಥಾಪನೆಯಾಗಬೇಕಿತ್ತು. ಬಡವರ ಮಕ್ಕಳು ಕಡಿಮೆ ಶುಲ್ಕ ಕೊಟ್ಟು ಉನ್ನತ ವಿದ್ಯಾಭ್ಯಾಸ ಪಡೆಯಲು ಸರ್ಕಾರಿ ವೈದ್ಯಕೀಯ ಕಾಲೇಜು ನಮ್ಮ ಜಿಲ್ಲೆಗೆ ಅವಶ್ಯಕತೆ ಇದೆ. ಇದನ್ನು ಸರ್ಕಾರ ಜವಾಬ್ದಾರಿಯಿಂದ ನಿರ್ಮಾಣ ಮಾಡಬೇಕು” ಎಂದು ಮನವಿ ಮಾಡಿದರು.
ಸಿದ್ದಲಿಂಗ ಬಾಗೇವಾಡಿ ಮಾತನಾಡಿ, “ಕಾಲೇಜಿಗೆ ಬೇಕಾದ ಪೂರಕ ವಾತಾವರಣ ನಮ್ಮ ವಿಜಯಪುರ ಜಿಲ್ಲೆಯಲ್ಲಿದೆ. ಎಲ್ಲಾ ಸಂಪನ್ಮೂಲಗಳು ಜಿಲ್ಲಾಸ್ಪತ್ರೆಯಲ್ಲಿರುವದರಿಂದ ವಿಜಯಪುರದಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಲೇಬೇಕು. ಇಲ್ಲವಾದರೆ, ಹೋರಾಟವನ್ನು ತೀವ್ರಗೊಳಿಸಲು ಹಣಿಯಾಗುತ್ತೇವೆ” ಎಂದು ಎಚ್ಚರಿಸಿದರು.
ಇದನ್ನೂ ಓದಿ: ವಿಜಯಪುರ | ಅಭಿವೃದ್ಧಿ ಅನುದಾನದಿಂದ ಪರಿಹಾರ ನೀಡುವುದು ಯಾವ ನ್ಯಾಯ: ಪಾಲಿಕೆ ಸದಸ್ಯ ಪ್ರಶ್ನೆ
ಜಿಲ್ಲೆಯ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಮೇಶ ಚೌಹಾಣ, ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಎಂಎಂ ಶೇಕ್, ನಿವೃತ್ತ ಉಪನ್ಯಾಸಕ ಎಸ್ ಆರ್ ಟಿಂಗ್ರಿ, ಕಾರ್ಮಿಕ ಸಂಘಟನೆಯ ಮುಖಂಡ ಡಾ. ಗುರಿಕಾರ, ಕರ್ನಾಟಕ ರಕ್ಷಣಾ ವೇದಿಕೆ, ಕನ್ನೆಡಿಗರ ಶಕ್ತಿ ಸಂಘಟನೆ, ವಾಲ್ಮಿಕಿ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೈನ್ಯ ಮತ್ತಿತರರು ಸಂಘಟನೆಗಳು ಧರಣಿಗೆ ಬೆಂಬಲ ನೀಡಿದರು.
ಈ ವೇಳೆ ಅಕ್ರಮ ಮಾಶಾಳಕರ, ಮಲ್ಲಿಕಾರ್ಜುನ ಬಟಗಿ, ಸುರೇಖಾ ರಾಜಪೊತ, ಜಗದೀಶ ಸೂರ್ಯವಂಶಿ, ಸುರೇಶ ಜೆ ಬಿ, ಸಿದ್ದರಾಮಯ್ಯ ಹಿರೇಮಠ ಇದ್ದರು.