ಬೀದರ್‌ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ

Date:

Advertisements

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ರವರೆಗೆ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬೀದರ್‌ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಭಾನುವಾರ ಭಾಲ್ಕಿಯಲ್ಲಿ ಚಾಲನೆ ನೀಡಿದರು.

ಬಳಿಕ ಸಚಿವರು ಮಾತನಾಡಿ, ʼರಾಜ್ಯದ 7 ಕೋಟಿಗೂ ಅಧಿಕ ಇರುವ ಜನರಿಗೆ ಸಾಮಾಜಿಕ ನ್ಯಾಯ ಸಿಗಬೇಕು. ಸಮಾಜದಲ್ಲಿರುವ ಯಾರೊಬ್ಬರೂ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬ ಘನ ಉದ್ದೇಶದಿಂದ ಸಮಾಜದ ಕಟ್ಟ ಕಡೆಯ ವ್ಯಕ್ತಿ, ನಿರ್ಗತಿಕರಿಗೂ ಸರ್ಕಾರಿ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಈ ಸಮೀಕ್ಷೆ ನಡೆಸಲಾಗುತ್ತಿದೆʼ ಎಂದರು.

ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಬಗ್ಗೆ 60 ಪ್ರಶ್ನೆಗಳ ಮುಖಾಂತರ ಸಮಗ್ರವಾಗಿ ವರದಿಯನ್ನು ಪಡೆದು, ಆ ವರದಿ ಆಧಾರದ ಮೇಲೆ ಸರ್ಕಾರದ ಮಟ್ಟದಲ್ಲಿ ಅವರಿಗೆ ಯಾವ ಸೌಲಭ್ಯ ಒದಗಿಸಬೇಕೆಂದು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಿ ಸಮ ಸಮಾಜ ನಿರ್ಮಿಸುವ ಉದ್ದೇಶ ನಮ್ಮ ಸರ್ಕಾರದ್ದಾಗಿದೆʼ ಎಂದು ತಿಳಿಸಿದರು.

WhatsApp Image 2025 09 22 at 3.33.34 PM

ʼಈ ಸಮೀಕ್ಷೆ ರಾಜ್ಯದ ಸಮಗ್ರ ಅಭಿವೃದ್ಧಿ, ಉತ್ತಮ ಯೋಜನೆ ರೂಪಣೆ ಹಾಗೂ ಜನಜೀವನ ಸುಧಾರಣೆಗೆ ಪ್ರಮುಖ ಆಧಾರವಾಗಲಿದೆ. ಆದ್ದರಿಂದ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರೂ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಿಖರ ಹಾಗೂ ಸತ್ಯ ಮಾಹಿತಿಯನ್ನು ನೀಡಬೇಕುʼ ಎಂದು ಸಚಿವ ಈಶ್ವರ ಖಂಡ್ರೆ ಅವರು ಮನವಿ ಮಾಡಿದರು.

ಇದನ್ನೂ ಓದಿ : ಬೀದರ್‌ | ಚೆಂಡು ಹೂವು ಕೃಷಿಯಲ್ಲಿ ಖುಷಿ ಕಂಡ ಬಿಎಸ್ಸಿ ಪದವೀಧರ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X