ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಮಣಿಪಾಲದ ರಜತಾದ್ರಿಯಲ್ಲಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖಾ ಕಚೇರಿಗೆ ಉಡುಪಿ ಲೋಕಾಯುಕ್ತ ಅಧಿಕಾರಿಗಳ ತಂಡ ಇಂದು ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಹಲವು ಸಮಯಗಳಿಂದ ಸಾರ್ವಜನಿಕರ 9/11 ಮತ್ತು ಏಕವಿನ್ಯಾಸದ ಕಡತಗಳನ್ನು ವಿಲೇವಾರಿ ಮಾಡದೆ ವಿನಾಹ ಕಾರಣ ಬಾಕಿ ಇರಿಸಲಾಗುತ್ತಿದೆ ಎಂಬ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಉಡುಪಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯ ಲೋಕಾಯುಕ್ತದಿಂದ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿ ಕಡತಗಳ ಪರಿಶೀಲನೆ ಮಾಡುತ್ತಿದ್ದಾರೆ.
ಕಡತಗಳ ಬಾಕಿ ಇರುವ ಬಗ್ಗೆ ದೂರು ನೀಡುವರು ಹಾಗೂ ಈ ಬಗ್ಗೆ ಮಾಹಿತಿ ಬೇಕಾದಲ್ಲಿ ತಕ್ಷಣ ಜಿಲ್ಲಾಧಿಕಾರಿ ಕಚೇರಿಯ ಬಳಿ ಇರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ಭೇಟಿ ನೀಡಬಹುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.