ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡುವೆ: ಸಚಿವ ಶಿವಾನಂದ ಪಾಟೀಲ

Date:

Advertisements

ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ‌. ಶರಣಪ್ರಕಾಶ ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.

ವಿಜಯಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆದಿರುವ ಸರ್ಕಾರ ಘೋಷಿಸಿರುವ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಡೆದಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.

“ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿರುವ ಬಂಥನಾಳ ಶಿವಯೋಗಿಗಳ ಹೆಸರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಕನಸಿದೆ. ಇದಕ್ಕಾಗಿ ನಾನು ಆರೋಗ್ಯ ಸಚಿವನಾಗಿದ್ದ ಸಂದರ್ಭದಲ್ಲಿ ಸರ್ಕಾರಿ ಕಾಲೇಜು ಆರಂಭಕ್ಕೆ ಬೇಕಿರುವ ಎಲ್ಲ ಸೌಲಭ್ಯ ಕಲ್ಪಿಸಿದ್ದೇನೆ” ಎಂದು ವಿವರಿಸಿದರು.

“ಹೊಸದಾಗಿ ಸರ್ಕಾರಿ ಕಾಲೇಜು ಸ್ಥಾಪನೆಗೆ ಕನಿಷ್ಟ 500 ಕೋಟಿ ರೂಪಾಯಿ ಬೇಕು‌. ಆದರೆ ವಿಜಯಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಾನು ಸಚಿವನಾಗಿ ಅಗತ್ಯ ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಸರ್ಕಾರ ಆರಂಭದಲ್ಲಿ 50 ಕೋಟಿ ರೂ.ನಂತೆ ಕೇವಲ 100 ಕೋಟಿ ರೂ‌. ಅನುದಾನ ನೀಡಿದರೂ ಸಾಕು” ಎಂದರು.

“ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ 2013ರಿಂದಲೂ ನಾನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಪ್ರಯತ್ನಿಸುತ್ತಿದ್ದೇನೆ. ಆಗ ಮುಖ್ಯಮಂತ್ರಿಯಾಗಿದ್ದ ಸಿದ್ಧರಾಮಯ್ಯ ಹಾಗೂ ಈ ಹಿಂದೆ ಅಧಿಕಾರದಲ್ಲಿದ್ದ ಬಸವರಾಜ ಬೊಮ್ಮಾಯಿ ಇಬ್ಬರೂ ಈ ವಿಷಯವಾಗಿ ನನಗೆ ಸದನದಲ್ಲೂ ಭರವಸೆ ನೀಡಿದ್ದರು. ಆದರೂ ರಾಜ್ಯದಲ್ಲಿ ಮಾತ್ರವಲ್ಲ ದೇಶದ ಯಾವುದೇ ರಾಜ್ಯದಲ್ಲಿ ಇಲ್ಲದ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಅನುಷ್ಠಾನ ವಿಜಯಪುರ ಜಿಲ್ಲೆಗೆ ಮಾತ್ರ ಏಕೆ ಎಂಬುದು ನನಗೂ ಅರ್ಥವಾಗುತ್ತಿಲ್ಲ” ಎಂದು ಅಸಹಾಯಕ ನುಡಿಗಳನ್ನಾಡಿದರು‌.

“ವಿಜಯಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಎಂಆರ್‌ಐ ಸ್ಕ್ಯಾನಿಂಗ್ ಸೆಂಟರ್, ರಾಜ್ಯದಲ್ಲೇ ಎಲ್ಲೂ ಇಲ್ಲದ 150 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಬಿಎಸ್‌ಸಿ ನರ್ಸಿಂಗ್ ಹಾಗೂ ಡಿಪ್ಲೊಮಾ ನರ್ಸಿಂಗ್ ಕಾಲೇಜುಗಳು, 150 ಎಕರೆ ವಿಸ್ತೀರ್ಣದ ಸರ್ಕಾರಿ ಆಸ್ಪತ್ರೆ ಆಸ್ತಿ ಸಂರಕ್ಷಣೆಗಾಗಿ ಕಾಂಪೌಂಡ್ ನಿರ್ಮಿಸಿದ್ದೇನೆ” ಎಂದು ವಿವರಿಸಿದರು.

“ವಿಜಯಪುರ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಐತಿಹಾಸಿಕ ತಾಜ್ ಬಾವಡಿಯಿಂದ ನೀರಿನ ಸೌಲಭ್ಯ ಕಲ್ಪಿಸಿದ್ದು ಹಾಗೂ ರಾಜ್ಯದಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಆಯುಷ್ ಆಸ್ಪತ್ರೆ ನಿರ್ಮಿಸಿದ್ದು ನನ್ನ ಅವಧಿಯಲ್ಲೇ” ಎಂದು ವಿವರಿಸಿದರು.

“ಬೆಳಗಾವಿ ಕಲಬುರಗಿ ವಿಭಾಗದ ಮಧ್ಯದಲ್ಲಿ ವಿಜಯಪುರದಲ್ಲಿ ಆರೋಗ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕರ ಹುದ್ದೆ ಸೃಷ್ಟಿಸಿದ್ದೇ ನಾನು. ನನ್ನ ಅವಧಿಯಲ್ಲಿ ನಿರ್ಮಿಸಿದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಈಚೆಗೆ ನಾನೇ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ 200 ಹುದ್ದೆ ಮಂಜೂರು ಮಾಡಿಸಿದ್ದೇನೆ. ಇವುಗಳು ನನ್ನ ಜವಾಬ್ದಾರಿ, ಒಬ್ಬ ಸಚಿವನಾಗಿ ಮಾಡಿದ ಕೆಲಸಗಳು” ಎಂದು ಜಿಲ್ಲೆಗೆ ಶಿವಾನಂದ ಪಾಟೀಲ ಅವರ ಕೊಡುಗೆ ಏನೆಂದು ಪ್ರಶ್ನಿಸುವವರಿಗೆ ಕಣ್ಣ ಮುಂದಿರುವ ದಾಖಲೆಗಳನ್ನು ಬಿಚ್ಚಿಟ್ಟರು.

ಈ ಸುದ್ದಿ ಓದಿದ್ದೀರಾ? ಮಂಗಳೂರು ದಸರಾ ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್

“ನಾನು ಬಸವವನಬಾಗೇವಾಡಿ ಕ್ಷೇತ್ರದಲ್ಲಿ ಸರ್ಕಾರಿ ಪದವಿ ಕಾಲೇಜು ಆರಂಭಿಸಿದ ಬಳಿಕವೇ ಜಿಲ್ಲಾ ಕೇಂದ್ರ ವಿಜಯಪುರದಲ್ಲಿ ಪದವಿ ಕಾಲೇಜು ಸ್ಥಾಪನೆಯಾಗಿದ್ದು. ನಮ್ಮ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾತ್ರವಲ್ಲ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಕಾನೂನು ಕಾಲೇಜುಗಳಂಥ ಶೈಕ್ಷಣಿಕ ಸೌಲಭ್ಯಗಳೂ ಇಲ್ಲವಾಗಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X