ಕಲಬುರಗಿ | ಮನೆ ಗೋಡೆ ಕುಸಿದು ಬಾಲಕಿ ಸಾವು, ನಾಲ್ವರಿಗೆ ಗಂಭೀರ ಗಾಯ

Date:

Advertisements

ಧಾರಾಕಾರ ಮಳೆಯಿಂದಾಗಿ ಗೋಡೆ ಕುಸಿದು ಬಾಲಕಿಯೊಬ್ಬಳು ಮೃತಪಟ್ಟಿದ್ದು, ಇನ್ನೂ ನಾಲ್ವರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಸಾನಿಯಾ ಸೈಪನಸಾಬ್ ತಾಂಬೋಳಿ (16) ಮೃತ ಬಾಲಕಿ. ಘಟನೆಯಲ್ಲಿ ಮೃತಳ ಸಹೋದರಿ ಮತ್ತು ಸಹೋದರರಾದ ಮಹಿಬೂಬ್ ತಾಂಬೋಳಿ, ನಿಶಾದ್ ತಾಂಬೋಳಿ, ಆಯಿಷಾ ತಾಂಬೋಳಿ ಹಾಗೂ ರಮಜಾನಬಿ ತಾಂಬೋಳಿ ಕಟ್ಟಡದ ಅವಶೇಷಗಳಲ್ಲಿ ಸಿಲುಕಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಭಾರೀ ಮಳೆಯಿಂದ ಗೋಡೆ ಕುಸಿದು ಐವರು ಮಕ್ಕಳು ಅವಶೇಷಗಳಲ್ಲಿ ಸಿಲುಕಿದ್ದರು. ನಾಲ್ವರನ್ನು ತಕ್ಷಣ ಹೊರ ತೆಗೆಯಲಾಗಿದೆ. ಸಾನಿಯಾಳನ್ನು ಹೊರತೆಗೆದಲು ತಡವಾದ ಕಾರಣ ಆಕೆ ಗಂಭೀರವಾಗಿ ಗಾಯಗೊಂಡಳು. ತಕ್ಷಣವೇ ತಾಲ್ಲೂಕು ಆಸ್ಪತ್ರೆಗೆ ರವಾನಿಸಿದರೂ ಅಲ್ಲಿ ವೈದ್ಯರಿಲ್ಲದ ಕಾರಣ ಚಿಕಿತ್ಸೆ ದೊರೆಯದೆ ಸಾನಿಯಾ ಮೃತಪಟ್ಟಿದ್ದಾಳೆ’ ಪ್ರತ್ಯಕ್ಷದರ್ಶಿಗಳು ಎಂದು ಹೇಳಿದ್ದಾರೆ.

WhatsApp Image 2025 09 22 at 6.21.45 PM
ಘಟನೆ ಖಂಡಿಸಿ ಕುಟುಂಬಸ್ಥರು, ಸ್ಥಳೀಯರು ಪ್ರತಿಭಟನೆ ನಡೆಸಿದರು.

ಯಡ್ರಾಮಿ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಬಾಲಕಿ ಸಾವಿಗೀಡಾಗಿದ್ದು, ಯಡ್ರಾಮಿ ತಾಲೂಕು ಕೇಂದ್ರವಾಗಿದ್ದರೂ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಸೌಲಭ್ಯಗಳಿಲ್ಲ. ವೈದ್ಯರು ಇಲ್ಲದಿರುವ ಕಾರಣ ಬಡ ಕುಟುಂಬದ ಮಗಳು ಅನ್ಯಾಯವಾಗಿ ಸಾವಿಗೀಡಾಗಿದ್ದಾಳೆ. ಸ್ಥಳೀಯ ಶಾಸಕರು, ಜಿಲ್ಲೆಯ ಹಾಗೂ ತಾಲ್ಲೂಕು ಅಧಿಕಾರಿಗಳು ಕೂಡಲೇ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ನೀಡಿ ಕನಿಷ್ಠ 25 ಲಕ್ಷ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಚೆಂಡು ಹೂವು ಕೃಷಿಯಲ್ಲಿ ಖುಷಿ ಕಂಡ ಬಿಎಸ್ಸಿ ಪದವೀಧರ

ಈ ಸಂದರ್ಭದಲ್ಲಿ ಅಮೀರ್ ಪಟೇಲ್ ಚಿಂಚೋಳಿ, ಲಾಡ್ಲೆಸಾಬ್ ಮನಿಯಾರ್, ಶಬ್ಬೀ ಉಲ್ಲಾ ದಖನಿ, ವಾಹೀದ್ ಖುರೇಷಿ, ಇಸ್ಮಾಯಿಲ್ ಖುರೇಷಿ, ವಿಶ್ವನಾಥ್ ಪಾಟೀಲ್, ರಿಯಾಜ್ ಚೌಧರಿ, ಇಬ್ರಾಹಿಂ ಚೌಧರಿ, ಫತ್ರುದ್ದೀನ್ ತಾಂಬೋಳಿ, ರಹೀಮ್ ಪಾಶಾ ಹೊಸಮನಿ ಸೇರಿದಂತೆ ಅನೇಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X