ಸೇಡಂ ಪಟ್ಟಣದ 100 ಹಾಸಿಗೆ ಸಾಮರ್ಥ್ಯವುಳ್ಳ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು 16.50 ಕೋಟಿ ರೂಪಾಯಿ ವೆಚ್ಚದಲ್ಲಿ 150 ಹಾಸಿಗೆ ಸಾಮರ್ಥ್ಯವುಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಡಿಗಲ್ಲು ಭೂಮಿಪೂಜೆ ನೆರವೇರಿಸಿದರು.
‘ಭೂಮಿ ಅಡಿಗಲ್ಲು ಪೂಜೆ ನೇರವೆರಿಸಿ ಮಾತನಾಡಿದ ಅವರು, ʼ2024-25ನೇ ಸಾಲಿನ ಕೆಕೆಆರ್‌ಡಿಬಿಯ 15ನೇ ಹಣಕಾಸು ಹಾಗೂ ರಾಜ್ಯ ವಲಯ ಅನುದಾನದ ಅಡಿಯಲ್ಲಿ ಸೇಡಂ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಸೇಡಂ ತಾಲೂಕಿನ ಶೈಕ್ಷಣಿಕ, ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ನಿರಂತರವಾಗಿ ಸರಕಾರದಿಂದ ಅನುದಾನವನ್ನು ಬಿಡುಗಡೆಗೊಳಿಸಲಾಗುತ್ತಿದ್ದು, ಒಟ್ಟಾರೆಯಾಗಿ ಬಡಜನರಿಗೆ ಸರಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವುದಕ್ಕೆ ನಮ್ಮ ಮೊದಲ ಆದ್ಯತೆಯಾಗಿದೆ’ ಹೇಳಿದರು.
ಸೇಡಂ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಆರಂಭವಾಗಿದೆ. ಅಲ್ಲದೇ ಎಕ್ಸ್ ರೇ ಸೇರಿದಂತೆ ಅಗತ್ಯ ಯಂತ್ರಗಳನ್ನು ಪೂರೈಸಲಾಗಿದೆ. ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆ, ಟ್ರಾಮ ಸೆಂಟರ್, ಕಿದ್ವಾಯಿ, ತಾಯಿಮಕ್ಕಳ ಆಸ್ಪತ್ರೆ ಸೇರಿದಂತೆ ಎಲ್ಲ ಆಸ್ಪತ್ರೆಗಳಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಮೀರಿಸುವ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕುʼ ಎಂದು ಅವರು ಹೇಳಿದರು.
ಇದನ್ನೂ ಓದಿ : ಬೀದರ್ | ರಸ್ತೆ, ಚರಂಡಿ ಅವ್ಯವಸ್ಥೆ : ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಆಕ್ರೋಶ
ಕಾರ್ಯಕ್ರಮದಲ್ಲಿ ಡಿಎಚ್ಓ ಶರಣಬಸಪ್ಪ ಖ್ಯಾತನಾಳ, ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಸಿಲ್ದಾರ್ ಶ್ರೀಯಾಂಕ ಧನಶ್ರೀ, ಪುರಸಭೆ ಅಧ್ಯಕ್ಷ ವಿರೇಂದ್ರ ರುದುನೂರು, ಸೇಡಂ ಆಸ್ಪತ್ರೆಯ ಆಡಳಿತಾಧಿಕಾರಿ ನಾಗರಾಜ ಮನ್ನೆ, ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ, ಮುಧೋಳ ಬ್ಲಾಕ್ ಅಧ್ಯಕ್ಷ ರವೀಂದ್ರ ನಂದಿಗಾಮ, ಕಾರ್ಮಿಕರ ಸಂಘದ ಅಧ್ಯಕ್ಷ ಸತೀಶರೆಡ್ಡಿ ಪಾಟೀಲ್ ರಂಜೋಳ್, ಪುರಸಭೆ ಸದಸ್ಯ ನಾಗಕುಮಾರ ಎಳ್ಳಿ, ಬಸವರಾಜ ಪಾಟೀಲ್ ಮತ್ತಿತರರಿದ್ದರು.
ಸಿಟಿಜನ್ ಜರ್ನಲಿಸ್ಟ್ : ಸುನೀಲ್ ರಾಣಿವಾಲ್