ʻಡಬಲ್‌ ದಿ ಬಸ್‌ʼ | ಸಾರ್ವಜನಿಕ ಸಾರಿಗೆ ವ್ಯವಸ್ಥೆ ಉತ್ತಮಗೊಳಿಸಲು ನಾಗರಿಕರಿಂದ ಅಭಿಯಾನ

Date:

Advertisements

ಸಾರ್ವಜನಿಕ ಸಂಚಾರ ಸಾರಿಗೆ ವ್ಯವಸ್ಥೆಯಲ್ಲಿ ತುರ್ತು ಹೂಡಿಕೆಗಾಗಿ ಆಗ್ರಹಿಸಿ ನಗರದ ಜಲ ವಾಯು ವಿಹಾರ (ಕಮ್ಮನಹಳ್ಳಿ) ಮತ್ತು ಅಗರ ಬಸ್ ನಿಲ್ದಾಣದಲ್ಲಿ ಬಸ್ಸು ಪ್ರಯಾಣಿಕರು, ನಾಗರಿಕರು ಮತ್ತು ವಿವಿಧ ನಾಗರಿಕ ಸೇವಾ ಸಂಸ್ಥೆಗಳ ಸದಸ್ಯರು ‘ಡಬಲ್ ದಿ ಬಸ್’ ಅಭಿಯಾನವನ್ನು ನಡೆಸಿದರು.

ಸೆ.೨೨, ʻವಿಶ್ವ ಕಾರು ಮುಕ್ತ ದಿನʼ ದಂದು, ನಾಗರಿಕರ ನೇತೃತ್ವದಲ್ಲಿ ನಡೆದ ಈ ಆಂದೋಲನದಲ್ಲಿ, ಪ್ರಯಾಣಿಕರು ಮತ್ತು ನಾಗರಿಕ ಸಮಾಜ ಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು. ಸುಸ್ಥಿರ ಮತ್ತು ಎಲ್ಲರಿಗೂ ಸಮಾನ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸಾರಿಗೆಯಲ್ಲಿ ಹೂಡಿಕೆ ಮಾಡುವಂತೆ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು. ಮೂರು ದಿನಗಳ ಕಾಲ ನಾಗರಿಕರ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ನಡೆದ ಈ ಅಭಿಯಾನವನ್ನು ಬೆಂಗಳೂರು ಸೇರಿದಂತೆ ಮುಂಬೈ, ಚೆನ್ನೈ, ಪುಣೆ ಮುಂತಾದ ಪ್ರಮುಖ ನಗರಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.

“ಬೆಂಗಳೂರಿನಲ್ಲಿ ಶೇಕಡಾ 81ರಷ್ಟು ಜನರು ತಮ್ಮ ದೈನಂದಿನ ಪ್ರಯಾಣಕ್ಕಾಗಿ ಬಿಎಂಟಿಸಿ (BMTC) ಬಸ್ಸುಗಳನ್ನು ಬಳಸುತ್ತಾರೆ (ಸರಾಸರಿ ದೈನಂದಿನ ಪ್ರಯಾಣಿಕರ ಸಂಖ್ಯೆ 42 ಲಕ್ಷಕ್ಕೂ ಹೆಚ್ಚು). ನಗರ ಸಾರಿಗೆ ವ್ಯವಸ್ಥೆ ನಮ್ಮ ನಗರದ ಸಂಚಾರ ವ್ಯವಸ್ಥೆಯ ಬೆನ್ನೆಲುಬಾಗಿದೆ. ಆದರೂ ಪ್ರಯಾಣಿಕರು ದಿನನಿತ್ಯ ಜನರಿಂದ ಕಿಕ್ಕಿರಿದ ಬಸ್ಸುಗಳನ್ನು ಏರಬೇಕಾಗುತ್ತದೆ. ಸರ್ಕಾರ ಬಸ್ಸುಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಮೂಲಕ ಪ್ರಯಾಣಿಕರಿಗೆ ಸುರಕ್ಷಿತ, ವಿಶ್ವಾಸಾರ್ಹ, ಪರಿಸರ-ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಒದಗಿಸಬಹುದುʼʼ ಎಂದು ಹೆಚ್‌ಎಸ್‌ಆರ್‌ ಲೇ ಔಟಿನ ಸಮುದಾಯ ಕಾರ್ಯಪಡೆಯ/ಕಮ್ಯುನಿಟಿ ಟಾಸ್ಕ್‌ಫೊರ್ಸ್‌ನ ಸ್ವಯಂಸೇವಕ ಸಚಿನ್ ಪಂಡಿತ್ ಹೇಳಿದರು.

ಹೆಚ್ಚಿನ ವಿವರಗಳಿಗೆ https://doublethebus.in/

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X