ಮಾಲೂರು ತಾಲೂಕಿನ ಕುಂಬಾರಪೇಟೆಯಲ್ಲಿ ನಗರಸಭೆ ಅಧ್ಯಕ್ಷೆ ವಿಜಯಲಕ್ಷ್ಮಿ ಲಕ್ಷ್ಮೀನಾರಾಯಣ ಅವರ ಮನೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರೂಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ನಗರಸಭೆ ಮುಖ್ಯ ಅಧಿಕಾರಿ ಪ್ರದೀಪ್ ಕುಮಾರ್, ತಾಲೂಕು ಶಿಕ್ಷಣಾಧಿಕಾರಿ ಬಿ ಪಿ ಕೆಂಪಯ್ಯ, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರುಗಳೊಂದಿಗೆ ಸಮೀಕ್ಷೆ ಕಾರ್ಯವನ್ನು ಪ್ರಾರಂಭಿಸಲಾಯಿತು.