ರೋಗಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಚಾಲಕ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ಆ್ಯಂಬುಲೆನ್ಸ್‌ನಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದರು. ಈ ವೇಳೆ, ಮಂಗಳೂರು ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ಆ್ಯಂಬುಲೆನ್ಸ್ ಪಲ್ಟಿಯಾಗಿದೆ. ಮೃತ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ.
ಆ್ಯಂಬುಲೆನ್ಸ್ ಪಲ್ಟಿಯಾಗಿದ್ದರಿಂದ ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನೂ ಹಾಗೂ ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಶಬೀರ್ ಸಾವನ್ನಪ್ಪಿದ್ದಾರೆ.
ರೋಗಿಯ ಪರಿಸ್ಥಿತಿ ಬಗ್ಗೆ ಮಾಹಿತಿ ದೊರೆತಿಲ್ಲ.
ಆ್ಯಂಬುಲೆನ್ಸ್ ಚಾಲಕ ಮೃತ ಶಬೀರ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಹಣ ಅಥವಾ ಇನ್ನಾವುದೇ ರೀತಿಯ ಸಹಾಯ ಮಾಡಿ ಸ್ಪಂದಿಸಬೇಕು.