ಉಡುಪಿ | ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

Advertisements

ಉಡುಪಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಭತ್ತದ ಬೆಂಬಲ ಬೆಲೆಯ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಯ ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದ್ದು, ರೈತರು ಅಕ್ಟೋಬರ್ 31 ರ ವರೆಗೆ ನೋಂದಣಿ ಮಾಡಿಕೊಳ್ಳಬಹುದು. ಸಾಮಾನ್ಯ ಭತ್ತಕ್ಕೆ 2369 ಹಾಗೂ ಗ್ರೇಡ್ ಎ ಭತ್ತಕ್ಕೆ 2389 ರೂ. ನಿಗಧಿಪಡಿಸಲಾಗಿದ್ದು, ಉಡುಪಿ ಹಾಗೂ ಕಾರ್ಕಳದ ಎ.ಪಿ.ಎಂ.ಸಿ ಯಾರ್ಡ್ ಮತ್ತು ಕೋಟೇಶ್ವರದ ಕೆ.ಎಫ್.ಸಿ.ಎಸ್.ಸಿ ಗೋದಾಮಿನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.

ರೈತರು ಬೆಳೆದಿರುವ ಧಾನ್ಯಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್ ದತ್ತಾಂಶದಿಂದ ಬೆಳೆ ಮಾಹಿತಿಯನ್ನು ನೇರವಾಗಿ ಪಡೆದು ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಳೆ ಮಾಹಿತಿಯನ್ವಯ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ರೈತರಿಂದ ಭತ್ತವನ್ನು ಖರೀದಿಸುವಂತೆ ಸೂಚಿಸಿದರು.

ಖರೀದಿಯಾಗುವ ಭತ್ತವನ್ನು ಗೋದಾಮುಗಳಲ್ಲಿ ಸುರಕ್ಷಿತವಾಗಿ ಸಂಗ್ರಹಿಸಲು ಅಗತ್ಯ ಕ್ರಮ ವಹಿಸಬೇಕು. ಭತ್ತ ಖರೀದಿ ನೋಂದಣಿ ಪ್ರಾರಂಭವಾಗಿರುವ ಬಗ್ಗೆ ಗ್ರಾಮೀಣ ಭಾಗದ ರೈತರಿಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಪ್ರಚಾರ ನೀಡಬೇಕು ಎಂದರು. ಭತ್ತವನ್ನು ಸರಬರಾಜು ಮಾಡುವ ರೈತರ ಬ್ಯಾಂಕ್‌ಗಳಿಗೆ ಹಣವನ್ನು ಡಿ.ಬಿ.ಟಿ ನೇರ ನಗದು ವರ್ಗಾವಣೆ ಮಾಡಲು ಕ್ರಮವಹಿಸಬೇಕು ಎಂದ ಅವರು, ಪ್ರತೀ ರೈತರಿಂದ ಪ್ರತೀ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಠ 50 ಕ್ವಿಂಟಾಲ್ ಖರೀದಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕದ್ರೋಳ್ಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಪೂರ್ಣಿಮಾ ಜೆ.ಸಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಜು ಎಂ.ಎಸ್,ಆಹಾರ ಇಲಾಖೆಯ ಉಪನಿರ್ದೇಶಕಿ ರಶ್ಮಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X