39 ವರ್ಷಗಳಲ್ಲಿಯೇ ಅತ್ಯಂತ ಭೀಕರ ಮಳೆ ಕಂಡ ಕೋಲ್ಕತ್ತಾ

Date:

Advertisements

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ನಗರವು 39 ವರ್ಷಗಳಲ್ಲಿಯೇ ಅತ್ಯಂತ ಭೀಕರ ಮಳೆ ಕಂಡಿದೆ. ಮಳೆ ಅಬ್ಬರಕ್ಕೆ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ರಾತ್ರಿಯಿಂದ ಬಿಟ್ಟೂಬಿಡೆ ಕೋಲ್ಕತ್ತಾದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ವಸತಿ ಪ್ರದೇಶಗಳು ಮತ್ತು ಕೈಗಾರಿಕಾ ಪ್ರದೇಶಗಳು ಜಲಾವೃತಗೊಂಡಿವೆ. ರಸ್ತೆಗಳು ನೀರಿನಲ್ಲಿ ಮುಳುಗಿವೆ. ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ. ವಿದ್ಯುತ್‌ ಕಂಬಗಳು ನೆಲಕ್ಕುರುಳಿದ ಪರಿಣಾಮ ನಿಂತ ನೀರಿನಲ್ಲಿ ವಿದ್ಯುತ್ ಪ್ರವಹಿಸಿ, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಹಲವಾರು ಭಾಗಗಳಲ್ಲಿ, ಜನರು ಮೊಣಕಾಲುವರೆಗಿನ ನೀರಿನಲ್ಲಿ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ.

ಕಳೆದ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ 251.4 ಮಿ.ಮೀ. ಮಳೆಯಾಗಿದೆ. 1986ರ ನಂತರ ಇದೇ ಮೊದಲ ಬಾರಿಗೆ ಕೋಲ್ಕತ್ತಾ ಭೀಕರ ಮಳೆ ಕಂಡಿದೆ. ಇದು, ಕಳೆದ 137 ವರ್ಷಗಳಲ್ಲಿಯೇ ಆರನೇ ಬೃಹತ್ ಮಳೆಯಾಗಿದೆ.

ಈ ಲೇಖನ ಓದಿದ್ದೀರಾ?: ಸೌಜನ್ಯ ಕೊಲೆಯ ಪ್ರಮುಖ ಸಾಕ್ಷಿಯಾಗುವರೇ ಚಿನ್ನಯ್ಯ? ವಿಡಿಯೋದಲ್ಲಿದೆ ಅಚ್ಚರಿಯ ಹೇಳಿಕೆ

ಬಂಗಾಳಕೊಲ್ಲಿಯ ಈಶಾನ್ಯ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ, ಹೆಚ್ಚು ಮಳೆ ಸುರಿಯುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಕೆಲವು ದಿನಗಳ ಕಾಲ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ಸೂಚನೆ ನೀಡಿದೆ.

ಮಳೆಯಿಂದಾಗಿ ರೈಲು ಸಂಚಾರವೂ ಕೂಡ ಸ್ಥಗಿತಗೊಂಡದೆ. ಪರಿಣಾಮ, ನೂರಾರು ಪ್ರಯಾಣಿಕರು ರೈಲು ನಿಲ್ದಾಣದಲ್ಲಿಯೇ ಕಾಯುತ್ತಿದ್ದಾರೆ. ಮಕ್ಕಳು ಮತ್ತು ವೃದ್ಧರು ಮನೆಯೊಳಗೆ ಕಾಲ ದೂಡಬೇಕಾದ ಪರಿಸ್ಥಿತಿ ಎದುರಾಗಿದೆ.

ಪಶ್ಚಿಮ ಬಂಗಾಳದ ಅತ್ಯಂತ ಬೃಹತ್ ಮತ್ತು ಜನಪ್ರಿಯ ವಾರ್ಷಿಕ ಹಬ್ಬ ದುರ್ಗಾ ಪೂಜೆಗೆ ಕೋಲ್ಕತ್ತಾ ಸಿದ್ದವಾಗುತ್ತಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಹು ಪೂಜೆಗಳನ್ನು ಈಗಾಗಲೇ ಉದ್ಘಾಟಿಸಿದ್ದು, ಹಬ್ಬಗಳು ಪ್ರಾರಂಭವಾಗಿವೆ. ಇದೇ ಸಮಯದಲ್ಲಿಯೇ ಮಳೆ ಆರ್ಭಟ ಹೆಚ್ಚಾಗಿದೆ. ದುರ್ಗಾ ಪೂಜೆಗಾಗಿ ಹತ್ತಾರು ಸಾವಿರ ಜನರು ಬರುವ ಪ್ರದೇಶಗಳು ಜಲಾವೃತಗೊಂಡಿವೆ. ಹಬ್ಬದ ಆಚರಣೆಗೂ ಅಡಚಣೆಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

Download Eedina App Android / iOS

X