ಎಸ್‌ ಎಲ್‌ ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಸಂತಾಪ

Date:

Advertisements

ಜನಪ್ರಿಯ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

“ಎಸ್ಎಲ್. ಭೈರಪ್ಪನವರು ನಮ್ಮ ಮನಸ್ಸನ್ನು ಬಡಿದೆಬ್ಬಿಸಿದ ಮಹಾನ್ ವ್ಯಕ್ತಿ. ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದವರು. ಧೀಮಂತ ನಾಯಕ. ಸದಾ ನೆನಪಿಡುವಂತಹ ಚಿಂತಕರನ್ನು ಕಳೆದುಕೊಂಡಿದ್ದೇವೆ. ಅವರ ವಿಚಾರಗಳು ಕನ್ನಡ ಸಾಹಿತ್ಯವನ್ನು ಬೆಳಗಿಸಿವೆ. ಅವರ ಬರಹಗಳು ಅನೇಕ ತಲೆಮಾರುಗಳ ಜನರಿಗೆ ಸ್ಫೂರ್ತಿ ನೀಡಿವೆ. ಸಮಾಜದ ಬಗ್ಗೆ ಆಳವಾಗಿ ಯೋಚಿಸಲು ಮತ್ತು ಪ್ರಶ್ನಿಸಲು ಪ್ರೇರೇಪಿಸಿವೆ. ಇತಿಹಾಸ ಮತ್ತು ಸಂಸ್ಕೃತಿಯ ಮೇಲಿನ ಪ್ರೀತಿ ಮುಂದಿನ ಪೀಳಿಗೆಗೆ ಮಾದರಿಯಾಗಿದೆ. ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

“ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

“ಇಹದ ‘ಯಾನ’ ಅಂತ್ಯ. ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್.‌ ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸಂತಾಪ ನುಡಿಗಳನ್ನಾಡಿದ್ದಾರೆ.

“ಕನ್ನಡ ಸಾಹಿತ್ಯ ಲೋಕದ ಮೇರು ಲೇಖಕ, ಸರಸ್ವತಿ ಸಮ್ಮಾನ್ ಪುರಸ್ಕೃತರಾದ, ಪದ್ಮಭೂಷಣ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಉತ್ಕೃಷ್ಟ ಕಾದಂಬರಿಗಳ‌ ನೀಡಿ, ಲಕ್ಷಾಂತರ ಓದುಗರ ಮನಗೆದ್ದಿದ್ದ, ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರು ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಪರ್ವ’ ಮತ್ತು ‘ಉತ್ತರಕಾಂಡ’ ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನೇ ಬದಲಿಸಿದ ಅಭಿಜಾತ ಕಾದಂಬರಿಕಾರ ಪದ್ಮಭೂಷಣ ಎಸ್.ಎಲ್. ಭೈರಪ್ಪನವರು ನಿಧನರಾದರೆಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು.

“ಭೈರಪ್ಪನವರ ಕಾದಂಬರಿಗಳನ್ನು ನಾನು ನಿಕಟವಾಗಿ ಓದಿದ್ದೇನೆ. ಅವರ ಕಥನ ಶೈಲಿ, ಪಾತ್ರ ಸೃಷ್ಟಿಯ ಪ್ರತಿಭೆಗೆ ಮಾರು ಹೋಗಿದ್ದೇನೆ. ಅವರು ಕನ್ನಡ ನೆಲದಲ್ಲಿ ಹುಟ್ಟಿ ಕನ್ನಡದಲ್ಲೇ ಬರೆದ ಅಪ್ಪಟ ಭಾರತೀಯ ಕಾದಂಬರಿಕಾರರು. ಮೇಲಾಗಿ ಹಾಸನ ಜಿಲ್ಲೆಯಲ್ಲಿ ಹುಟ್ಟಿದ್ದ ‘ಅಮರ ಪ್ರತಿಭೆ’ ಎಂಬ ಹೆಮ್ಮೆ ನನ್ನದು. ಅವರ ಅಗಲಿಕೆಯಿಂದ ಬಹುದೊಡ್ಡ ಶೂನ್ಯ ಸೃಷ್ಟಿಯಾಗಿದೆ. ಶ್ರೀಯುತರ ನಿಧನ ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಸಂತಾಪ ಹೇಳಿದ್ದಾರೆ.

“ನಾಡಿನ ದಿಗ್ಗಜ ಸಾಹಿತಿ, ಮಹೋನ್ನತ ಕಾದಂಬರಿಕಾರರಾಗಿ ಕನ್ನಡಕ್ಕೆ ʼಸರಸ್ವತಿ ಸಮ್ಮಾನ್ʼ ಗೌರವ ತಂದುಕೊಟ್ಟ ಪದ್ಮಭೂಷಣ ಡಾ.ಎಸ್.ಎಲ್.ಭೈರಪ್ಪನವರ ಅಗಲಿಕೆ ತೀವ್ರ ಶೋಕವನ್ನುಂಟು ಮಾಡಿದೆ. ಸಾಹಿತಿ ಭೈರಪ್ಪ ಅವರು ಅಗಾಧ ಸಂಶೋಧನೆಗಳಿಂದ, ಇತಿಹಾಸದ ವ್ಯಾಪಕ ಅಧ್ಯಯನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಅರ್ಥಪೂರ್ಣ ಸಾಹಿತ್ಯ ರಚಿಸಿದವರು. ತಮ್ಮ ಪ್ರಖರ ರಾಷ್ಟ್ರೀಯತೆಯ ಚಿಂತನೆ, ಆಳವಾದ ವಿಮರ್ಶೆ ಹೂರಣದ ಸಾಹಿತ್ಯವನ್ನು ನಾಡಿಗೆಲ್ಲ ಹಂಚಿದವರು ಎಂದು ಸಚಿವ ಜೋಶಿ ಸ್ಮರಿಸಿದ್ದಾರೆ. ಭೈರಪ್ಪ ಅವರ ಕಾದಂಬರಿ-ಕೃತಿಗಳು ಬೇರೆ ಬೇರೆ ಭಾಷೆಗಳಲ್ಲಿ ಸಹ ಭಾಷಾಂತರ ಹೊಂದಿ ಜನಪ್ರಿಯಗೊಂಡಿದ್ದು ಈ ಮೇರು ಸಾಹಿತಿಯ ಅಗಾಧ ಪ್ರತಿಭೆಗೆ ಸಾಕ್ಷಿ. ಭೈರಪ್ಪನವರ ಅಗಲಿಕೆಯಿಂದ ನಮ್ಮ ನಾಡಿನ ಸಾರಸ್ವತ ಲೋಕ ಬಡವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿರುವ ಸಚಿವ ಪ್ರಲ್ಹಾದ ಜೋಶಿ, ಭೈರಪ್ಪ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದೇವರು ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕಂಬನಿ ಮಿಡಿದಿದ್ದಾರೆ.

ವಿಜಯೇಂದ್ರ ಸಂತಾಪ

ಖ್ಯಾತ ಕಾದಂಬರಿಗಾರ ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಂತಾಪ ಸೂಚಿಸಿದ್ದು, “ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದ ಎಸ್.ಎಲ್. ಭೈರಪ್ಪ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತಿ ಸಮ್ಮಾನ್, ಪದ್ಮಭೂಷಣ, ಪದ್ಮಶ್ರೀ ಹಾಗೂ ನಾಡೋಜ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಮೃತರ ಕುಟುಂಬಕ್ಕೆ, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ” ಎಂದು ಪ್ರಾರ್ಥಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

Download Eedina App Android / iOS

X