ಕರ್ನಾಟಕದ 16 ಜಿಲ್ಲೆಗಳಲ್ಲಿ 6 ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

Advertisements

ಉತ್ತರದ ರಾಜ್ಯಗಳಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಹಲವಾರು ಮಂದಿ ಜೀವ ಕಳೆದುಕೊಂಡಿದ್ದಾರೆ. ಗುಜರಾತ್, ರಾಜಸ್ಥಾನ, ಹರಿಯಾಣ, ದೆಹಲಿ ಹಾಗೂ ಉತ್ತರ ಪ್ರದೇಶ ರಾಜ್ಯಗಳಿಗೂ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿಯೂ ಮಳೆ ಅಬ್ಬರ ಮುಂದುವರೆಯಲಿದ್ದು, ಅಕ್ಟೋಬರ್ 1ರವರೆಗೆ 16 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಧಾರವಾಡ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ 16 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಉಳಿದಂತೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ ಜಿಲ್ಲೆಗಳಿಯೂ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಈ ಲೇಖನ ಓದಿದ್ದೀರಾ?: ಎಚ್1ಬಿ ವೀಸಾದಿಂದ ಅಮೆರಿಕಕ್ಕಾದ ಲಾಭವೇನು, ಭಾರತಕ್ಕಾದ ನಷ್ಟವೇನು?

ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಸೆಪ್ಟೆಂಬರ್ 27ರಿಂದ ಹೆಚ್ಚು ಮಳೆ ಸುರಿಯಲಿದೆ ಎಂದು ಇಲಾಖೆ ಅಂದಾಜಿಸಿದೆ. ಯೆಲ್ಲೋ ಅಲರ್ಟ್‌ ಘೋಷಿಸಲಾಗಿರುವ ಜಿಲ್ಲೆಗಳಲ್ಲಿ 120 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X