ವಿಜಯಪುರ | ಋತುಚಕ್ರದ ವೇಳೆ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಮುಖ್ಯ: ಡಾ. ಅನುರಾಧಾ ಜೋಶಿ

Date:

Advertisements

ಮಹಿಳೆಯರ ಋತುಚಕ್ರ ಅಥವಾ ಮುಟ್ಟಾಗುವುದು ಒಂದು ನೈಸರ್ಗಿಕ ಪ್ರಕ್ರಿಯೆ, ಪ್ರೌಢಾವಸ್ಥೆಗೆ ಬಂದಾಗ ಪ್ರತಿಯೊಬ್ಬ ಮಹಿಳೆಯೂ ಕೂಡಾ ಈ ಹಂತವನ್ನು ದಾಟಲೇಬೇಕು. ಹಾಗಾಗಿ ಋತುಚಕ್ರದ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಮುಖ್ಯ ಎಂದು ಭಾರತೀಯ ಕುಟುಂಬ ಯೋಜನಾ ಸಂಘದ ವೈದ್ಯಾಧಿಕಾರಿ ಡಾ. ಅನುರಾಧಾ ಜೋಶಿ ಸಲಹೆ ನೀಡಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗ ಹಾಗೂ ಮಮದಾಪುರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ, ಭಾರತ ಸರ್ಕಾರದ ಪ್ರಧಾನಮಂತ್ರಿ ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ(ಪಿಎಂ-ಉಷಾ) ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದ ನೆರವಿನಿಂದ ʼಮಹಿಳೆಯರ ಋತುಚಕ್ರ ಆರೋಗ್ಯʼದ ಕುರಿತು ಮಮದಾಪುರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಮಹಿಳೆಯರು ಮುಟ್ಟಿನ ದಿನಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದಿದ್ದರೆ ಹಲವಾರು ಬ್ಯಾಕ್ಟೀರಿಯಾ ಉತ್ಪತ್ತಿಯಾಗಿ ಸೋಂಕು ಹರಡುವುದರ ಜತೆಗೆ ಮಾರಣಾಂತಿಕ ಕಾಯಿಲೆಗಳಿಗೆ ಒಳಗಾಗುವ ಸಾಧ್ಯೆತಗಳಿವೆ” ಎಂದರು.

“ಮಹಿಳೆಯರ ಋತುಚಕ್ರದ ಸಂದರ್ಭದಲ್ಲಿ ಮಹಿಳೆಯರ ದೇಹದಲ್ಲಿ ಹಾರ್ಮೋನ್‌ಗಳಲ್ಲಿ ಕಂಡುಬರುವ ಬದಲಾವಣೆಗಳು ಮಹಿಳೆಯರಲ್ಲಿ ಹಲವಾರು ರೀತಿಯ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಪ್ರಮುಖವಾಗಿ ಈ ಸಮಯದಲ್ಲಿ ವಿಪರೀತ ಹೊಟ್ಟೆನೋವು, ಕಾಲುಗಳಲ್ಲಿ ಸೆಳೆತ, ಕೆಲವರಲ್ಲಿ ಬೆನ್ನುನೋವು, ವಿಪರೀತ ಸ್ರವಿಕೆಯಂತಹ ದೈಹಿಕ ಸಮಸ್ಯೆಗಳು ಸಾಕಷ್ಟು ತೊಂದರೆಗಳಿಗೆ ಕಾರಣವಾಗುತ್ತವೆ. ಈ ತೊಂದರೆಗಳನ್ನು ಸಮಚಿತ್ತದಿಂದ ನಿಭಾಯಿಸಬೇಕು” ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಶಿವಾನಂದ ಹಿರೇಮಠ ಮಾತನಾಡಿ, “ವಿದ್ಯಾರ್ಥಿಗಳು ಮುಟ್ಟಿನ ಆರೋಗ್ಯದ ಬಗ್ಗೆ ಕಾರ್ಯಾಗಾರದಲ್ಲಿ ಅರಿತುಕೊಂಡಿರುವ ಸಂಗತಿಗಳನ್ನು ಸದುಪಯೋಗ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ ನಗರದಲ್ಲಿ ಫ್ಲೆಕ್ಸ್‌ ವಿಚಾರಕ್ಕೆ ಗಲಾಟೆ; ಯಾವುದೇ ಕಲ್ಲುತೂರಾಟ ನಡೆದಿಲ್ಲ: ಎಸ್‌ಪಿ ಸ್ಪಷ್ಟನೆ

ಕಾರ್ಯಾಗಾರದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಪ್ರೊ. ಜಿ ಬಿ ಸೋನಾರ ಅವರು, ಇಂದಿನ ದಿನಗಳಲ್ಲಿ ಹದಿಹರೆಯದ ವಿದ್ಯಾರ್ಥಿನಿಯರು ಆರೋಗ್ಯದ ಬಗ್ಗೆ ಅರಿವು ಮತ್ತು ಜ್ಞಾನ ಹೊಂದುವುದು ಆಗತ್ಯ ಎಂದರು.

ಕಾರ್ಯಾಗಾರದಲ್ಲಿ, ಡಾ. ಎಸ್ ಎಸ್ ಮೇತ್ರಿ, ಡಾ. ಪ್ರಕಾಶ ಹಡಪದ, ಕು. ರುಕ್ಸಾನ್ ಎಫ್ ಹಾಗೂ ಕಾಲೇಜಿನ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X