ಶಿಕ್ಷಕರ ಕೆಲಸ ದೇವರ ಕೆಲಸ. ಶಿಕ್ಷಕರಿಲ್ಲದೆ ಸಮೃದ್ಧ ಸಮಾಜ ನಿರ್ಮಾಣ ಅಸಾಧ್ಯ. ಮಾದರಿ ದೇಶವನ್ನು ಕಟ್ಟಲು ಶಿಕ್ಷಕರ ಪಾತ್ರವೇ ಬಹಳ ಮಹತ್ವವಾಗಿದೆ ಎಂದು ಶಾಲೆಯ ಪ್ರಾಂಶುಪಾಲೆ ಕವಿತಾ ಬಾಲಕೃಷ್ಣ ಹೇಳಿದರು.
ಕೋಲಾರ ಜಿಲ್ಲೆಯ ಬೇತಮಂಗಲ ಪಟ್ಟಣದ ಸಮೀಪದ ಟಿ ಗೊಲ್ಲಹಳ್ಳಿ ಬಳಿ ಇರುವ ಶ್ರೀ ವಿದ್ಯಾಸಂಸ್ಕೃತಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
“ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜತೆಗೆ ಜೀವನದಲ್ಲಿ ಬದುಕುವ ಮಾರ್ಗವನ್ನು ತಿಳಿಸಿಕೊಡುತ್ತಾರೆ. ಹಾಗೆಯೇ ಪ್ರತಿಯೊಬ್ಬರ ಜೀವನದಲ್ಲೂ ಶಿಕ್ಷಕರ ಪಾತ್ರ ಬಹಳ ದೊಡ್ಡದು. ಬದಕನ್ನು ರೂಪಿಸಿದ ಶಿಕ್ಷಕರಿಗೆ ಧನ್ಯವಾದಗ ತಿಳಿಸಲು ಇದೊಂದು ಒಳ್ಳೆಯ ದಿನ” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
“ಯಾವುದೇ ಕ್ಷೇತ್ರದಲ್ಲಿ ಗುರು ಇಲ್ಲದೆ ಶಿಕ್ಷಣ ಪಡೆಯಲು ಸಾಧ್ಯವಿಲ್ಲ. ಗುರುವಿನ ಮಹತ್ವ ಬಹಳ ಅರ್ಥಪೂರ್ಣ. ಅಂತಹ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಇಲ್ಲಿಯ ಗುರುಗಳು ವಿದ್ಯಾರ್ಥಿಗಳಿಗೆ ನೀಡುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರವಲ್ಲದೆ ಅನೇಕ ಕ್ಷೇತ್ರಗಳಲ್ಲಿ ಉತ್ತಮ ಸ್ಥಾನವನ್ನು ಪಡೆದು ಶಾಲೆಗೆ, ಗುರುಗಳಿಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಋತುಚಕ್ರದ ವೇಳೆ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಮುಖ್ಯ: ಡಾ. ಅನುರಾಧಾ ಜೋಶಿ
ಈ ಸಂದರ್ಭದಲ್ಲಿ ಪ್ರಾಂಶುಪಾಲೆ ಕವಿತಾ ಬಾಲಕೃಷ್ಣ, ಉಪ ಪ್ರಾಂಶುಪಾಲ ಸುಹಾಸ್, ಶಾಲಾ ಕಾರ್ಯದರ್ಶಿ, ಬಾಲಕೃಷ್ಣ, ಮತ್ತು ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.