ಚುನಾವಣೆ ಸೋತ ನಂತರವೂ ಗೂಂಡಾ ರಾಜಕಾರಣ ಬಿಡದ ಬಿಜೆಪಿ: ರಮೇಶ್‌ ಬಾಬು ವಾಗ್ದಾಳಿ

Date:

Advertisements
  • ‘ಬಿಜೆಪಿ ನಾಯಕರೇ ಪ್ರಾಣಭಯದಲ್ಲಿ ಬದುಕುತ್ತಿದ್ದಾರೆ’
  • ‘ಪ್ರಭು ಚವ್ಹಾಣ್‌ ಅವರಿಗೆ ಸ್ಪೀಕರ್‌ ಸೂಕ್ತ ರಕ್ಷಣೆ ನೀಡಲಿ’

ಬಿಜೆಪಿ ನಾಯಕರೇ ಪ್ರಾಣಭಯದಲ್ಲಿ ಬದುಕುತ್ತಿದ್ದಾರೆ. ಚುನಾವಣೆಗೂ ಮೊದಲು ಗೂಂಡಾ ರಾಜಕಾರಣ ಮಾಡುತ್ತಿದ್ದ ಬಿಜೆಪಿ, ಚುನಾವಣೆ ಸೋತ ನಂತರವೂ ಹಳೆಯ ಚಾಳಿ ಬಿಟ್ಟಿಲ್ಲ ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಕಿಡಿಕಾರಿದರು.

ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಸಚಿವ ಭಗವಂತ ಖೂಬಾ ಅವರಿಂದ ನನಗೆ ಜೀವ ಬೆದರಿಕೆ ಹಾಕಲಾಗಿದೆ, ನನ್ನ ಪ್ರಾಣಕ್ಕೆ ಆಪತ್ತಿದೆ ಎಂದು ಔರಾದ್‌ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ್‌ ಅವರು ಗಂಬೀರವಾದ ಆರೋಪ ಮಾಡಿದ್ದಾರೆ. ಹೀಗಿದ್ದಾಗ್ಯೂ ಬಿಜೆಪಿಯಲ್ಲಿ ದಲಿತ ಶಾಸಕನ ಪರ ನಿಲ್ಲಲು ಯಾರೂ ಸಿದ್ದರಿಲ್ಲ” ಎಂದು ಟೀಕಿಸಿದರು.

“ವಿಧಾನಸಭಾ ಚುನಾವಣೆಯ ಮೊದಲು ಮತ್ತು ನಂತರವೂ ಬಿಜೆಪಿ ಅಪರಾಧಿಗಳಿಗೆ ಕುಮ್ಮಕ್ಕು ನೀಡುವ ಕೆಲಸ ಮಾಡಿಕೊಂಡು ಬರುತ್ತಿದೆ. ಬೀದರ್‌ ಜಿಲ್ಲಾ ಎಸ್‌ಪಿಗೆ ಭಗವಂತ ಖೂಬಾ ಅವರು ದೂರನ್ನು ಕೊಟ್ಟಿದ್ದು, ಅದರಲ್ಲಿ “ಪ್ರಭು ಚವ್ಹಾಣ್‌ ಅವರಿಗೆ ಏನಾದರೂ ತೊಂದರೆಯಾದರೆ ಅದಕ್ಕೆ ನಾನು ಹೊಣೆಗಾರನಲ್ಲ” ಎಂದ ದೂರನ್ನು ಕೊಟ್ಟಿದ್ದಾರೆ. ರಾಜ್ಯ ಬಿಜೆಪಿ ಘಟಕ ಖೂಬಾ ಅವರಿಗೆ ನೋಟಿಸ್‌ ನೀಡಬೇಕಿತ್ತು, ಸ್ಪಷ್ಟನೆ ಕೇಳಬೇಕಿತ್ತು ಅಥವಾ ಕೇಂದ್ರ ಸಂಪುಟದಿಂದ ತೆಗೆದು ಹಾಕಬೇಕಿತ್ತು. ಇದನ್ನೆಲ್ಲಾ ಮಾಡದೇ ಕ್ರಿಮಿನಲ್‌ಗಳನ್ನ ರಕ್ಷಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ” ಎಂದು ದೂರಿದರು.

Advertisements

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯರನ್ನು ಕೆಳಗಿಳಿಸಲು ʼಆಪರೇಷನ್‌ ಹಸ್ತʼಕ್ಕೆ ಮುಂದಾದ ಡಿಕೆ ಶಿವಕುಮಾರ್:‌ ಯತ್ನಾಳ್‌ ಆರೋಪ

ಸರ್ಕಾರ ರಕ್ಷಣೆ ನೀಡಲಿ

“ರಾಷ್ಟ್ರೀಯ ಬಿಜೆಪಿ ನಾಯಕರು ಸುಮ್ಮನೆ ಕುಳಿತಿದ್ದಾರೆ. ಕಾಂಗ್ರೆಸ್‌ ಪಕ್ಷವು ವಿಧಾನಸಭಾ ಸ್ಪೀಕರ್‌ ಅವರಲ್ಲಿ ಮನವಿ ಮಾಡುತ್ತಿದ್ದು, ಶಾಸಕರಾದ ಪ್ರಭು ಚವ್ಹಾಣ್‌ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಮತ್ತು ನ್ಯಾಯಾಂಗ ತನಿಖೆಗೆ ಸೂಚಿಸಬೇಕು. ಭಗವಂತ ಖೂಬಾ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಬೀದರ್‌ ಜನತೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದರು.

ಶಿಕ್ಷಣದ ಹಕ್ಕು ರಾಜ್ಯಗಳ ಬಳಿಯೇ ಇರಬೇಕು

“ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ರದ್ದುಮಾಡಲಾಗುವುದು ಎಂದು ನಮ್ಮ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಅದರಂತೆ ನಾವು ನಮ್ಮ ಮಾತಿಗೆ ಬದ್ದರಾಗಿದ್ದೇವೆ. ಯಾವುದೇ ಕಾರಣಕ್ಕೂ ಶಿಕ್ಷವನ್ನು ರಾಜ್ಯ ಪಟ್ಟಿಯಿಂದ ತಗೆದು ಕೇಂದ್ರ ಪಟ್ಟಿಗೆ ಸೇರಿಸಬಾರದು. ಶಿಕ್ಷಣದ ಕುರಿತು ಕಾನೂನು ತೆಗೆದುಕೊಳ್ಳುವ ಹಕ್ಕು ರಾಜ್ಯಗಳ ಬಳಿಯೇ ಇರಬೇಕು” ಎಂದು ಹೇಳಿದರು.

“ಶಿಕ್ಷಣವನ್ನು ತಿರುಚುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನೂತನ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ತೀರ್ಮಾನ ತೆಗೆದುಕೊಳ್ಳುವ ಹಕ್ಕನ್ನು ರಾಜ್ಯಗಳಿಗೆ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದರು. ಅದನ್ನು ನಾವು ಸ್ವಾಗತಿಸುತ್ತೇವೆ. ಶೇ 30 ರಷ್ಟು ಶಿಕ್ಷಕರ ವರ್ಗಾವಣೆ ಅತ್ಯಂತ ಸುಲಲಿತವಾಗಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ನಡೆದಿದೆ. ಜೊತೆಗೆ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವ ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X